ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕೆಪಿಸಿಸಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಐದು ವಿಭಾಗಗಳಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಪರಾಮರ್ಶೆ ನಡೆಯುತ್ತಿದೆ. ಪಕ್ಷ ಸಂಘಟನೆಗೆ ಬಲ ತುಂಬಬೇಕಾದ ಕಡೆ ಜಿಲ್ಲಾ ಹಾಗೂ ಬ್ಲಾಕ್ ಘಟಕಗಳ ಅಧ್ಯಕ್ಷರ ಬದಲಾವಣೆ ಆಗಲಿದೆ. ಹೊಸಬರಿಗೆ ಹಾಗೂ ಉತ್ಸಾಹಿ ನಾಯಕರಿಗೆ ಅವಕಾಶ ಸಿಗಲಿದೆ. ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಿತಿಗಳನ್ನು ರಚಿಸಲಾಗಿದೆ’ ಎಂದು ತಿಳಿಸಿದರು.