ಮಂಗಳೂರು: ಸಾಮರಸ್ಯ ಮಂಗಳೂರು ವತಿಯಿಂದ ಮೇ 29ರಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಟ್ಸ್ ಹಾಸ್ಟೆಲ್ನಲ್ಲಿರುವ ಸಿ.ವಿ. ನಾಯಕ್ ಹಾಲ್ನಲ್ಲಿ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಾಮರಸ್ಯ ಸಂಘಟನೆಯ ಅಧ್ಯಕ್ಷೆ ಮಂಜುಳಾ ನಾಯಕ್ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದೇಶದ ಏಕತೆ ಮತ್ತು ಸಮಗ್ರತೆ ಉಳಿಯಲು ಸೌಹಾರ್ದ, ಸಾಮರಸ್ಯ, ಸಹಬಾಳ್ವೆಯನ್ನು ಕಾಯ್ದುಕೊಳ್ಳಬೇಕಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ, ಸಹಬಾಳ್ವೆಯ ಸಂದೇಶ ಸಾರುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಹುಬ್ಬಳ್ಳಿ ವಿರಕ್ತಮಠದ ಗುರುಪಾದೇಶ್ವರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಉದ್ಘಾಟಿಸುವರು. ಮಂಗಳೂರು ರಾಮಕೃಷ್ಣ ಮಠದ ಏಕಗಮ್ಯಾನಂದ ಸ್ವಾಮೀಜಿ, ದೇರೆಬೈಲ್ ಚರ್ಚ್ ಧರ್ಮಗುರು ಫಾ.ಜೋಸೆಫ್ ಮಾರ್ಟಿಸ್, ಮಹಮ್ಮದ್ ಕುಂಞಿ, ಉಡುಪಿ ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಸಾಮರಸ್ಯ ಸಂಘಟನೆಯ ಕೋಶಾಧಿಕಾರಿ ಪ್ರಕಾಶ್ ಬಿ. ಸಾಲಿಯಾನ್, ಸಂಚಾಲಕರಾದ ಮೊಹಮ್ಮದ್ ಕುಂಜತ್ತಬೈಲ್, ಸಂತೋಷ್ ಕಾಮತ್, ಜೆರಾಲ್ಡ್ ಟವರ್ಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.