ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ವನಿವರ್ಧಕ ಬಳಕೆ ಅನುಮತಿಗೆ ಸಮಿತಿ ರಚನೆ

Last Updated 26 ಮೇ 2022, 3:43 IST
ಅಕ್ಷರ ಗಾತ್ರ

ಮಂಗಳೂರು: ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳು ಮತ್ತು ಧ್ವನಿ ಉತ್ಪಾದಿಸುವ ಉಪಕರಣಗಳ ಬಳಕೆ ಮಾಡುವ ಸಂಬಂಧ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ಉತ್ತರ ವಿಭಾಗ, ದಕ್ಷಿಣ ವಿಭಾಗ ಹಾಗೂ ಕೇಂದ್ರ ವಿಭಾಗ, ಬಂಟ್ವಾಳ ತಾಲ್ಲೂಕು, ಪುತ್ತೂರು– ಕಡಬ ತಾಲ್ಲೂಕು, ಬೆಳ್ತಂಗಡಿ ತಾಲ್ಲೂಕು, ಸುಳ್ಯ ತಾಲ್ಲೂಕುಗಳಿಗೆ ಸಮಿತಿ ರಚಿಸಲಾಗಿದೆ. ಧ್ವನಿ ಉತ್ಪಾದಿಸುವ ಉಪಕರಣಗಳ ಬಳಕೆದಾರರು 15 ದಿನಗಳ ಒಳಗಾಗಿ ಅಧಿಕೃತ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಅನುಮತಿ ಪಡೆಯದಿದ್ದಲ್ಲಿ ಇಂತಹ ಉಪಕರಣಗಳನ್ನು ತೆರವುಗೊಳಿಸಲಾಗುತ್ತದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT