ದಕ್ಷಿಣ ಆಫ್ರಿಕಾದ 107 ಪ್ರಜೆಗಳ ಗಡೀಪಾರಿಗೆ ಸಿದ್ಧತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

7

ದಕ್ಷಿಣ ಆಫ್ರಿಕಾದ 107 ಪ್ರಜೆಗಳ ಗಡೀಪಾರಿಗೆ ಸಿದ್ಧತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

Published:
Updated:

ಮಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದು, ಮಾದಕ ವಸ್ತು ಮಾರಾಟ ಜಾಲದಲ್ಲಿ ಸಕ್ರಿಯವಾಗಿದ್ದ ದಕ್ಷಿಣ ಆಫ್ರಿಕಾದ 107 ಪ್ರಜೆಗಳನ್ನು ಸೆರೆ ಹಿಡಿದಿದ್ದು, ಶೀಘ್ರದಲ್ಲಿ ಗಡೀಪಾರು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಹೊರಹಾಕುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯ ಸರ್ಕಾರದ ವೆಚ್ಚದಲ್ಲೇ 107 ಮಂದಿಯನ್ನು ವಾಪಸು ಕಳುಹಿಸಲು ಸಿದ್ಧತೆ ನಡೆದಿದೆ. ಆಫ್ರಿಕಾದ ರಾಯಭಾರ ಕಚೇರಿಗೆ ಈ ವಿಷಯವನ್ನು ಈಗಾಗಲೇ ತಿಳಿಸಲಾಗಿದೆ' ಎಂದರು.

ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದೆ. ಪೊಲೀಸರ ತೀರ್ಮಾನಗಳಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಪೂಜೆ, ಪುಣ್ಯತಿಥಿ ಸೇರಿದಂತೆ ಎಲ್ಲದಕ್ಕೂ ಸೂಕ್ತ ಸಮಯದಲ್ಲಿ ಪೊಲೀಸರು ಅವಕಾಶ ನೀಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದಿದೆ. ತನಿಖೆ ಪೂರ್ಣಗೊಂಡ ಬಳಿಕ ಪೊಲೀಸರು ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳುತ್ತಾರೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !