ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಕಪಿತಾನಿಯೊ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

Published 27 ಮಾರ್ಚ್ 2024, 6:22 IST
Last Updated 27 ಮಾರ್ಚ್ 2024, 6:22 IST
ಅಕ್ಷರ ಗಾತ್ರ

ಮಂಗಳೂರು: ನಗರದ ಕಪಿತಾನಿಯೊ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು (432) ವಿದ್ಯಾರ್ಥಿಗಳು ಈ ಕೇಂದ್ರದ 19 ಕೊಠಡಿಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷೆ ನಡೆಯುತ್ತಿದ್ದ ಹಲವು ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಪೂರೈಕೆಯೂ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಿರುವ ಬಗ್ಗೆ ಕೇಂದ್ರದ ಮುಖ್ಯಸ್ಥರೊಂದಿಗೆ ಮಾಹಿತಿ ಪಡೆದುಕೊಂಡು ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕಾರ್ಯನಿರ್ವಹಣೆಯನ್ನು ವೀಕ್ಷಿಸಿದರು. ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ಕ್ರಮವಹಿಸುವಂತೆ ಸೂಚಿಸಿದರು.

ಡಿಡಿಪಿಐ ವೆಂಕಟೇಶ್ ಪಟಗಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಯ ನೋಡಲ್ ಅಧಿಕಾರಿ ವೆಂಕಟೇಶ್ ನಾಯಕ್,

ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಡಿಸೋಜ ಜೊತೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT