ಬೆಳ್ತಂಗಡಿ (ದಕ್ಷಿಣ ಕನ್ನಡ): ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಅ. 9ರಂದು 13 ವರ್ಷ ತುಂಬುತ್ತಿದ್ದು ಆ ದಿನವನ್ನು ರಾಜ್ಯದಾದ್ಯಂತ ನ್ಯಾಯಕ್ಕಾಗಿ ಜನಾಗ್ರಹ ದಿನವನ್ನಾಗಿ ಆಚರಿಸಲು ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ ಕರೆ ನೀಡಿದೆ.

ಅಂದು ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಹಶೀಲ್ದಾರ್, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ವೇದವಲ್ಲಿ, ಪದ್ಮಲತಾ, ಆನೆ ಮಾವುತ ನಾರಾಯಣ, ಸಹೋದರಿ ಯಮುನಾ ಮತ್ತು ಸೌಜನ್ಯಾ ಪ್ರಕರಣಗಳಲ್ಲಿ ನ್ಯಾಯ ಸಿಗಬೇಕು. ಎಸ್ಐಟಿ ತನಿಖೆ ಸರಿಯಾದ ದಾರಿಯಲ್ಲಿ ಸಾಗಬೇಕು ಮತ್ತು ಸೌಜನ್ಯಾ ಪರ ಹೋರಾಟಗಾರರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಲಾಗಿದೆ.

ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ‘ಧರ್ಮಸ್ಥಳ ದೌರ್ಜನ್ಯಗಳು: ಇತಿಹಾಸ ಮತ್ತು ವರ್ತಮಾನ' ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಮುಖಂಡ ಶೇಖರ್ ಲಾಯಿಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.