ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಜನ್ಯ ಕೊಲೆ ಪ್ರಕರಣ: 16ರಂದು ತೀರ್ಪು

Published 2 ಜೂನ್ 2023, 22:43 IST
Last Updated 2 ಜೂನ್ 2023, 22:43 IST
ಅಕ್ಷರ ಗಾತ್ರ

ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ತೀರ್ಪು ಅನ್ನು ಸಿಬಿಐ ವಿಶೇಷ ನ್ಯಾಯಾಲಯ ಜೂನ್ 16ರಂದು ಪ್ರಕಟಿಸಲಿದೆ.

ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯ ಅವರು 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರು ದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.

ಶಂಕಿತ ಆರೋಪಿ, ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ ಸಂತೋಷ್ ರಾವ್‌ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಸಾರ್ವಜನಿಕರ ಕೈಗೆ ಸಿಕ್ಕಿದ್ದು, ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಆತನನ್ನು ಬಂಧಿಸಿದ್ದರು. ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಂತೋಷ್ ರಾವ್ ಸುಮಾರು ಆರು ಬಾರಿ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗದೆ, ತಲೆ ಮರೆಸಿಕೊಂಡಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT