ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ | ಸೌಜನ್ಯಾ ಕೊಲೆ ಪ್ರಕರಣ: ಆ.28ಕ್ಕೆ ‘ಚಲೋ-ಬೆಳ್ತಂಗಡಿ’

Published 22 ಆಗಸ್ಟ್ 2023, 13:55 IST
Last Updated 22 ಆಗಸ್ಟ್ 2023, 13:55 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘11 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾದ ಧರ್ಮಸ್ಥಳದ ಪಾಂಗಾಳ ನಿವಾಸಿ ಸೌಜನ್ಯಾ ಪ್ರಕರಣದ ತನಿಖೆಯನ್ನು  ನ್ಯಾಯಸಮ್ಮತವಾಗಿ ಮಾಡಬೇಕು. ಈ ಸಂಬಂಧ ಆ.28ರಂದು ಬೆಳ್ತಂಗಡಿಯಲ್ಲಿ ಚಲೋ ಬೆಳ್ತಂಗಡಿ ಮಹಾಧರಣಿ ನಡೆಯಲಿದೆ’ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಸಿಬಿಐ ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖವಾದ ಕೆಲವು ಅಂಶಗಳು ಸೌಜನ್ಯಾ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆದಿದೆ ಎಂಬ ಅನುಮಾನವನ್ನು ಬಲಗೊಳಿಸಿವೆ. ಈಗಾಗಲೆ ಮುಖ್ಯಮಂತ್ರಿ ಬಳಿ ಚರ್ಚಿಸಿದ್ದು, ನಾನು ಪ್ರಸ್ತಾಪ ಮಾಡಿದಂತೆ ತನಿಖೆ ನಡೆಸಿದರೆ ಆರೋಪಿಗಳು ಸಿಕ್ಕಿಕೊಳ್ಳುತ್ತಾರೆ. ಇನ್ನೆರಡು ದಿನಗಳಲ್ಲಿ ಗೃಹಸಚಿವರನ್ನೂ ಭೇಟಿಯಾಗಿ ಮನವರಿಕೆ ಮಾಡಲಾಗುವುದು. ಇದರ ಭಾಗವಾಗಿ ನ್ಯಾಯಕ್ಕೆ ಒತ್ತಾಯಿಸಿ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆ.28ರಂದು ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಚಲೋ ಬೆಳ್ತಂಗಡಿ ಮಹಾಧರಣಿ ನಡೆಸಲಿದ್ದೇವೆ' ಎಂದರು.

‘ಸೌಜನ್ಯಾಳಿಗೆ ನ್ಯಾಯ ಸಿಗಬಾರದು ಎಂದು ಕೆಲವು ಶಕ್ತಿಗಳು ಆ.28ರಂದು ಧರಣಿ ಇಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ, ಅಂದು ರಾಜ್ಯ ಮಟ್ಟದ ಹೋರಾಟ ಬೆಳ್ತಂಗಡಿ ಚಲೋ ನಡೆಯಲಿದೆ. ಸೌಜನ್ಯಾಗಿ ನ್ಯಾಯ ಸಿಗಬೇಕು ಎಂಬ ನಿರೀಕ್ಷೆಯಲ್ಲಿ ಇರುವ ಎಲ್ಲರೂ ಮಹಾಧರಣಿಯಲ್ಲಿ ಭಾಗವಹಿಸಬೇಕು’ ಎಂದರು.

ರಾಜ್ಯ ಜನಪರ ಸಂಘಟನೆಗಳ ವೇದಿಕೆ ಸಂಚಾಲಕ ಬಿ.ಎಂ.ಭಟ್ ಮಾತನಾಡಿ, ‘ಚಲೋ ಬೆಳ್ತಂಗಡಿ ಮಹಾಧರಣಿಗೆ ಉಭಯ ಜಿಲ್ಲೆಯಿಂದ 10 ಸಾವಿರ ಮಂದಿ ಭಾಗವಹಿಸಲಿದ್ದು, ರಾಜ್ಯದಾದ್ಯಂತ ಸುಮಾರು 15 ಸಾವಿರ ಮಂದಿ ಭಾಗವಹಿಸಲಿರುವರು’ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಮನೋಹರ್ ಕುಮಾರ್, ಕಾಂಗ್ರೆಸ್ ಮುಖಂಡ ಜಯ ವಿಕ್ರಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT