ಗುರುವಾರ , ಮೇ 19, 2022
21 °C

ನಿವೃತ್ತ ಎಸ್ಪಿ ಪಿ.ಎಂ. ಪೆಮ್ಮಯ್ಯ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಿವೃತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಂದಿಕಂಡ ಮಾದಪ್ಪ ಪೆಮ್ಮಯ್ಯ (72) ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಬೆಳಗಾವಿ ನಗರ, ಉಡುಪಿ, ಕೋಟಾ, ಪಾಂಡೇಶ್ವರ, ಉರ್ವ, ಬಂದರು ಠಾಣೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಕರಾವಳಿ ಕಾವಲು ಪಡೆಯ ಮುಖ್ಯಸ್ಥರೂ ಆಗಿದ್ದರು. ಒಂದೂವರೆ ದಶಕದ ಹಿಂದೆ ಕರ್ನಾಟಕ ನಕ್ಸಲ್ ನಿಗ್ರಹ ಪಡೆಯಲ್ಲಿ ಎಸ್ಪಿಯಾಗಿದ್ದರು. ಮುಖ್ಯಮಂತ್ರಿಗಳ ಭದ್ರತಾ ಪಡೆಯ ಮುಖ್ಯಸ್ಥರೂ ಆಗಿದ್ದರು. ಎರಡು ಬಾರಿ ಮುಖ್ಯಮಂತ್ರಿಗಳ ಪದಕವನ್ನು ಪಡೆದಿದ್ದರು.

ಐವತ್ತು ವರ್ಷಗಳ ಹಿಂದೆ ಮೈಸೂರು ವಿಶ್ವವಿದ್ಯಾಲಯದ ಹಾಕಿ ತಂಡದ ಅತ್ಯುತ್ತಮ ಆಟಗಾರರಾಗಿದ್ದು, ಸಂಯುಕ್ತ ವಿಶ್ವವಿದ್ಯಾಲಯ ತಂಡದಲ್ಲಿಯೂ ಸ್ಥಾನ ಪಡೆದು ರಾಷ್ಟ್ರೀಯ ಕೂಟದಲ್ಲಿ ಆಡಿದ್ದರು. ಕೊಡಗು ಜಿಲ್ಲೆಯ ಅನೇಕ ಹಾಕಿ ಟೂರ್ನಿಗಳಿಗೆ ಪ್ರೋತ್ಸಾಹಕರಾಗಿದ್ದರು.

ನಿವೃತ್ತಿಯ ನಂತರ ಇವರು ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿದ್ದರು. ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಕೊಡಗು ಜಿಲ್ಲೆಯ ಹಾಲುಗುಂದ ಗ್ರಾಮದಲ್ಲಿ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.

ಇವರ ತಂದೆ ಸ್ವಾತಂತ್ರ್ಯ ಹೋರಾಟಗಾರ ಮಾದಪ್ಪನವರು ಶಿಕ್ಷಣ ತಜ್ಞರಾಗಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು