ಭಾನುವಾರ, ಸೆಪ್ಟೆಂಬರ್ 20, 2020
21 °C

ಬೀಡಿ ಕಾರ್ಮಿಕರ ಪರಿಹಾರಕ್ಕೆ ಜೆಡಿಎಸ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಪುತ್ತೂರು: ‘ಬೀಡಿ ಕಾರ್ಮಿಕರಿಗೆ ಮಾಲೀಕರು ಕನಿಷ್ಠ ಕೂಲಿ,ತುಟ್ಟಿಭತ್ತೆ ಮತ್ತು ಡಿ.ಎ. ತಕ್ಷಣ ವಿತರಿಸಬೇಕು,  10 ದಿನಗಳ ಒಳಗಾಗಿ ಸ್ಪಂದನೆ ಸಿಗದಿದ್ದರೆ ಪುತ್ತೂರಿನ ವಿಧಾನಸೌಧದ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು. ಬೀಡಿ ಕಂಪನಿ ಕಾರ್ಯಾಲಗಳಿಗೆ ಬೀಗ ಹಾ ಪ್ರತಿಭಟಿಸಲಾಗುವುದು’ ಎಂದು ಅವರು ಎಚ್ಚರಿಸಿದರು. ಎಂದು ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಶ್ರಫ್ ಕಲ್ಲೇಗ ಅವರು ಆಗ್ರಹಿಸಿದರು.

ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಮಿಕರಿಗೆ ಅನ್ಯಾಯ ಮಾಡಿದ ಪ್ರಕರಣಗಳಲ್ಲಿ ಶಾಮೀಲಾಗಿರುವ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುರ್ಧ ಕ್ರಮಕೈಗೊಳ್ಳಬೇಕು. ಸರ್ಕಾರ ನಿಗದಿ ಪಡಿಸಿರುವ ವೇತನ ಹಾಗೂ ಬಾಕಿಯಿರುವ ವೇತನವನ್ನು ಬೀಡಿ ಕಂಪನಿಗಳು ತಕ್ಷಣ ನೀಡುವಂತೆ ಕ್ರಮಕೈಗೊಳ್ಳಬೇಕು’ ಎಂದು ತ್ತಾಯಿಸಿದರು.

ಜೆಡಿಎಸ್ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷ ಐ.ಸಿ.ಕೈಲಾಸ್ ಕೆದಂಬಾಡಿ, ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸಾಲ್ಯಾನ್, ಕ್ಷೇತ್ರ ಸಮಿತಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಾವೀರ ಜೈನ್  ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.