ಮಂಗಳೂರು: ‘ಅಪಾರ ಬುದ್ಧಿಶಕ್ತಿ ಹೊಂದಿರುವ ಮನುಷ್ಯ ತನ್ನ ಜ್ಞಾನವನ್ನು ಸಮಾಜದ ಒಳಿತಿಗೆ ಬಳಸಬೇಕು. ದೇವರು ಮತ್ತು ಸಮಾಜದ ಋಣ ತೀರಿಸಬೇಕು’ ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಮಂಗಳೂರಿನ ರಾಮಕ್ಷತ್ರಿಯ ಸೇವಾ ಸಂಘದ ವತಿಯಿಂದ ಮಾಜಿ ಸಚಿವ ಕೆ. ಕೃಷ್ಣ ಪಾಲೆಮಾರ್ ನೇತೃತ್ವದಲ್ಲಿ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಭಾನುವಾರ ನಡೆದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಜೀವನದಲ್ಲಿ ಅಗತ್ಯಕ್ಕಿಂತ ಹೆಚ್ಚಿನದನ್ನು ಪರಮಾತ್ಮ ಕರುಣಿಸಿದರೆ, ಅದನ್ನು ಸಮಾಜಕ್ಕೆ ನೀಡಿ ಋಣ ತೀರಿಸುವ ಮೂಲಕ ಶ್ರೇಯಸ್ಸು ಹೊಂದಬೇಕು. ನಮ್ಮ ಶಕ್ತಿಯನ್ನು ಸಮಾಜದ ಒಳಿತಿಗೆ ಬಳಸಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ‘ಸಮಾಜ ಸಂಘಟನೆಯ ಉದ್ದೇಶದಿಂದ ಅಭಿನಂದನಾ ಕಾರ್ಯಕ್ರಮ ನಡೆಸಲಾಗಿದೆ. ವೈದ್ಯರ ಸೇವೆ ಇಂದಿನ ಸಮಾಜಕ್ಕೆ ಅಗತ್ಯ ಎಂಬ ಕಾರಣಕ್ಕೆ ಸಾಧಕ ವೈದ್ಯರನ್ನು ಸನ್ಮಾನಿಸಲಾಗಿದೆ’ ಎಂದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ನಿಟ್ಟೆ ವಿವಿ ಸಹಕುಲಾಧಿಪತಿ ಶಾಂತಾರಾಮ ಶೆಟ್ಟಿ, ವೆನ್ಲಾಕ್ ಆಸ್ಪತ್ರೆ ಅಧೀಕ್ಷಕ ಡಾ. ಶಿವಪ್ರಕಾಶ್, ವಿಶ್ವ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಶಶಿಧರ ನಾಯ್ಕ್, ರಾಮ ಕ್ಷತ್ರಿಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸುರೇಶ್ ರಾವ್ ಉಪಸ್ಥಿತರಿದ್ದರು. ಶಿವಾನಂದ ಬೇಕಲ್ ಅವರ ‘ಒಗಟಿನ ಮನೆ’ ಪುಸ್ತಕ ಬಿಡುಗಡೆಗೊಳಿಸಲಾಯಿತು.

ಸಂಘದ ಅಧ್ಯಕ್ಷ ಮುರಳೀಧರ ಸಿ.ಎಚ್ ಸ್ವಾಗತಿಸಿದರು. ಯೋಗೀಶ್ ಕುಮಾರ್ ಜೆಪ್ಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ರವೀಂದ್ರ ರಾವ್ ವಂದಿಸಿದರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

ನಾಲ್ವರು ಸಾಧಕರಿಗೆ ಸನ್ಮಾನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಚ್. ಪ್ರಭಾಕರ್ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರು ಪವರ್ ಲಿಫ್ಟಿಂಗ್ ಕ್ರೀಡಾಪಟು ನಾಗಶ್ರೀ ಗಣೇಶ್ ಶೇರುಗಾರ್ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.