ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ 22ನೇ ವರ್ಷದ ‘ಶ್ರೀರಾಮೋತ್ಸವ’ ಸಂಪನ್ನ

Last Updated 31 ಮಾರ್ಚ್ 2023, 16:21 IST
ಅಕ್ಷರ ಗಾತ್ರ

ಮಂಗಳೂರು: ‘ಸನಾತನ ಹಿಂದೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸಲು ‘ಶ್ರೀರಾಮೋತ್ಸವ’ದಂತಹ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಬೇಕು. ಈ ಮೂಲಕ ಧರ್ಮ ಜಾಗೃತಿ ಕಾರ್ಯ ನಡೆಯಬೇಕು’ ಎಂದು ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀ ರಾಮೋತ್ಸವ ಸಮಿತಿ ಜಂಟಿಯಾಗಿ ನಗರದ ಕದ್ರಿ ಮೈದಾನದಲ್ಲಿ ಆಯೋಜಿಸಿರುವ 22ನೇ ವರ್ಷದ ‘ಶ್ರೀರಾಮೋತ್ಸವ’ದ ಮೂರನೇ ದಿನ ಶುಕ್ರವಾರ ನಡೆದ ಸಮಾರೋಪದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

‘ಭಾರತ ದೇಶವು ರಾಮರಾಜ್ಯದತ್ತ ಸಾಗುತ್ತಿದೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವೂ ನಿರ್ಮಾಣವಾಗುತ್ತಿದೆ. ಈ ಸಂದರ್ಭದಲ್ಲಿ ನಾವು ರಾಮನ ಚಿಂತನೆಯಡಿ ಒಗ್ಗಟ್ಟಾಗಿ, ಸದೃಢ ಸಮಾಜ ಕಟ್ಟುವ ಕೆಲಸಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ಹೇಳಿದರು.

‘ಭಾರತವನ್ನು ಎಲ್ಲ ಸಿದ್ಧಾಂತಗಳೂ ಆಳಿ ಹೋಗಿವೆ. ಆದರೆ, ಅಂತಿಮವಾಗಿ ಹಿಂದೂ ಧರ್ಮವೇ ದೇಶವನ್ನು ಆಳುತ್ತಿದೆ. ಇದು ನಮ್ಮ ಸಂಸ್ಕೃತಿಯ ತಾಕತ್ತು. ಮಕ್ಕಳಿಗೆ ನಮ್ಮ ಸಂಸ್ಕೃತಿಯನ್ನು ತಿಳಿಸುವ ಕೆಲಸ ಪ್ರತಿ ಮನೆಗಳಲ್ಲೂ ನಡೆಯಬೇಕು’ ಎಂದು ಹೇಳಿದರು.

ಕದ್ರಿ ಮಂಜುನಾಥ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಎಚ್‌.ಕೆ. ಪುರುಷೋತ್ತಮ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ರಾಧಾಕೃಷ್ಣ ಮಂದಿರದ ಗಿರಿಧರ ಭಟ್‌, ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ, ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ ಪುರಾಣಿಕ್, ಶಾರದಾ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಸುಧಾಕರ ರಾವ್‌ ಪೇಜಾವರ, ಉದ್ಯಮಿ ಮಯೂರ್‌ ಉಳ್ಳಾಲ್‌, ಹಿಂದೂ ಜಾಗರಣ ವೇದಿಕೆಯ ವಾಸುದೇವ ಗೌಡ, ವಿಶ್ವ ಹಿಂದೂ ಪರಿಷತ್‌ನ ಭುಜಂಗ ಕುಲಾಲ್‌, ಗೋಪಾಲ ಕುತ್ತಾರ್‌, ದುರ್ಗಾವಾಹಿನಿಯ ಜಿಲ್ಲಾ ಸಂಚಾಲಕಿ ಶ್ವೇತಾ ಆದ್ಯಪಾಡಿ ಇದ್ದರು. ಶ್ರೀರಾಮೋತ್ಸವ ಸಮಿತಿ ಅಧ್ಯಕ್ಷ ಬಿ.ನಾಗಾರಾಜ ಶೆಟ್ಟಿ ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT