ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ, ಪಿಯುಸಿ ನಿರ್ಣಾಯಕ ಹಂತ: ಉಳ್ಳಾಲ ಠಾಣೆಯ ಪಿಎಸ್ಐ ಸಂದೀಪ್ ಜಿ.ಎಸ್

Last Updated 19 ನವೆಂಬರ್ 2021, 1:54 IST
ಅಕ್ಷರ ಗಾತ್ರ

ಉಳ್ಳಾಲ: ಶೈಕ್ಷಣಿಕ ಜೀವನದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಎನ್ನುವುದು ನಿರ್ಣಾಯಕ ಕಾಲಘಟ್ಟ. ಈ ಅವಧಿಯಲ್ಲಿ ಒಳ್ಳೆಯದಕ್ಕಿಂತ, ಕೆಟ್ಟ ವಿಚಾರಗಳ ಬಗ್ಗೆಯೇ ಆಕರ್ಷಣೆ ಹೆಚ್ಚಿರುವುದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಎಂದು ಉಳ್ಳಾಲ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಮತ್ತು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಆಶ್ರಯದಲ್ಲಿ ಮಂಗಳೂರು ಶಿಕ್ಷಣ ಸಂಪನ್ಮೂಲ ಕೆಂದ್ರದ ನೇತೃತ್ವದಲ್ಲಿ ‘ಮಕ್ಕಳ ಹಕ್ಕುಗಳ ಮಾಸೋತ್ಸವ-2021’ರ ಪ್ರಯುಕ್ತ ಪೊಲೀಸ್ ಠಾಣೆಯಲ್ಲಿ ಗುರುವಾರ ನಡೆದ ಅರಿವು -ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೌರಾಯುಕ್ತ ರಾಯಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಪಡಿ ಸಂಸ್ಥೆಯ ಅಧ್ಯಕ್ಷ ರೆನ್ನಿ ಡಿಸೋಜ, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಸಂಚಾಲಕ ಮಂಜು ವಿಟ್ಲ, ಶಿಕ್ಷಣ ಸಂಪನ್ಮೂಲ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಂಗಳೂರು ರಿಯಾಝ್, ಸದಸ್ಯೆ ನಂದಾ ಪಾಯ್ಸ್, ಅಬ್ದುಲ್ ರಹ್ಮಾನ್ ಕುತ್ತಾರ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಉಷಾ ನಾಯ್ಕ ಇದ್ದರು.

ಉಳ್ಳಾಲ ಅಳೇಕಲಮದನಿ ಪದವಿಪೂರ್ವ ಕಾಲೇಜು, ತೊಕ್ಕೊಟ್ಟು ಸಂತ ಸೆಬಾಸ್ಟಿಯನ್ನರ ಪದವಿ ಪೂರ್ವ ಕಾಲೇಜು, ಮಾಸ್ತಿಕಟ್ಟೆ ಉಳ್ಳಾಲ ಭಾರತ್ ಪದವಿಪೂರ್ವ ಕಾಲೇಜು, ಮುಕ್ಕಚ್ಚೇರಿ ಟಿಪ್ಪು ಸುಲ್ತಾನ್ ಪದವಿಪೂರ್ವ ಕಾಲೇಜು, ಸೋಮೇಶ್ವರ ಪರಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆನಂದಾಶ್ರಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಗುರುಮೂರ್ತಿ ಸ್ವಾಗತಿಸಿದರು. ಕಮಲಾ ಗೌಡ ಕಾರ್ಯಕ್ರಮ ನಿರೂಪಿಸಿದರು. ಉಳ್ಳಾಲ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪ್ರದೀಪ್ ಟಿ.ಎಸ್. ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT