ಮಂಗಳವಾರ, ಸೆಪ್ಟೆಂಬರ್ 21, 2021
21 °C

ಮಂಗಳೂರು: ಬಬ್ಬುಕಟ್ಟೆ ಖಾಸಗಿ ಶಾಲೆಯ ಲ್ಯಾಬ್‌ನಲ್ಲಿ ಬೆಂಕಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಬ್ಬುಕಟ್ಟೆ  ಖಾಸಗಿ ಶಾಲೆಯ ಲ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಈ ಶಾಲೆಯಲ್ಲಿ‌ ಎಸ್ಸೆಸ್ಸೆಲ್ಸಿ ಪರೀಕ್ಷಾ‌ ಕೇಂದ್ರವಿದ್ದು, ಅಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಬ್ಬುಕಟ್ಟೆಯ ಹೀರಾ ಪದವಿಪೂರ್ವ ಕಾಲೇಜಿನ ಪ್ರಯೋಗಾಲಯದಲ್ಲಿ ಸುಮಾರು 10.40 ಕ್ಕೆ ಬೆಂಕಿ‌ ಕಾಣಿಸಿಕೊಂಡಿತ್ತು. ಈ ಕಟ್ಟಡದಲ್ಲಿ ಸುಮಾರು 200 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದರು. ಅವರನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಆಗಿಲ್ಲ. ಪರೀಕ್ಷೆಗೂ  ಅಡ್ಡಿಯಾಗಿಲ್ಲ. ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ ಎಂದು‌ ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಮಂಗಳೂರು ನಗರದ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಸೋಮವಾರ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.

ಡಿಡಿಪಿಐ ಮಲ್ಲೆಸ್ವಾಮಿ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತರಬೇಕು, ಕೇರಳದಿಂದ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಿರುವುದನ್ನು ಖಾತ್ರಿ ಪಡಿಸಿಕೊಂಡರು. ಈ ಸಂದರ್ಭದಲ್ಲಿ ಸಂಬಂಧಿಸಿದ ಶಾಲೆಯ ಸಿಬ್ಬಂದಿ‌ ಇದ್ದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು