ಪರೀಕ್ಷೆ ರದ್ದತಿ ಪುನರ್ವಿಮರ್ಶೆ ನಡೆಸಲಿ: ಕಲ್ಕೂರ
ಮಂಗಳೂರು: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ರದ್ದತಿ ಕುರಿತಂತೆ ಸರ್ಕಾರ ನಿಲುವನ್ನು ಪುನರ್ ವಿಮರ್ಶೆ ನಡೆಸಿ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಮನವಿ ಮಾಡಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗದಂತೆ ಎಚ್ಚರ ವಹಿಸಬೇಕು. ಸ್ವಲ್ಪ ವಿಳಂಬವಾದರೂ ಕೋವಿಡ್ ಮುಕ್ತ ವಾತಾವರಣದಲ್ಲೇ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕಲ್ಕೂರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.