ಶನಿವಾರ, ಡಿಸೆಂಬರ್ 4, 2021
20 °C

ಮರುಮೌಲ್ಯಮಾಪನದಲ್ಲಿ ಬಂತು ‘625’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ಇಲ್ಲಿನ ಲಾಯಿಲ ಸೇಂಟ್‌ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಶ್ರೇಯಾ ಡೋಂಗ್ರೆ, ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ 625ಕ್ಕೆ 622 ಅಂಕ ಗಳಿಸಿ ತಾಲ್ಲೂಕಿಗೆ ಮೊದಲ ಸ್ಥಾನ ಪಡೆದಿದ್ದಳು. 

ಆದರೆ, ಪರೀಕ್ಷೆಯಲ್ಲಿ ಪರಿಪೂರ್ಣವಾಗಿ ಉತ್ತರಿಸಿದ ಬಗ್ಗೆ ಆತ್ಮವಿಶ್ವಾಸ ಹೊಂದಿದ ಆಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. ಈಗ ಆಕೆಗೆ 625ಕ್ಕೆ 625 ಅಂಕ ಬಂದಿದ್ದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಡಾ. ಶಶಿಕಾಂತ್ ಡೋಂಗ್ರೆ ಮತ್ತು ಡಾ. ದೀಪಾಳಿ ಎಸ್ ಡೋಂಗ್ರೆ ದಂಪತಿ ಪುತ್ರಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು