ಗುರುವಾರ , ಜನವರಿ 28, 2021
27 °C

ಶುರುವಾಗದ ಪ್ಯಾಸೆಂಜರ್‌ ರೈಲು: ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರ್ನಾಟಕದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ–ಕಾಲೇಜು ತರಗತಿಗಳು ಆರಂಭವಾಗಿವೆ. ಆದರೆ, ಕಾಸರಗೋಡು ಜಿಲ್ಲೆಯಿಂದ ಮಂಗಳೂರಿಗೆ ಬರುವ ಬಹುತೇಕ ವಿದ್ಯಾರ್ಥಿಗಳು, ರೈಲನ್ನೇ ಅವಲಂಬಿಸಿದ್ದು, ಇದುವರೆಗೆ ಚೆರ್ವತ್ತೂರು– ಮಂಗಳೂರು, ಕಣ್ಣೂರ್-ಮಂಗಳೂರು ಪಾಸೆಂಜರ್ ರೈಲುಗಳು ಆರಂಭವಾಗಿಲ್ಲ.

ರೈಲು ಸಂಚಾರಕ್ಕೆ ಅನುಮತಿ ನೀಡುವ ನಿಟ್ಟಿನಲ್ಲಿ ದಕ್ಷಿಣ ರೈಲ್ವೆಯ ಅಭಿಪ್ರಾಯ ವ್ಯಕ್ತಪಡಿಸಿದೆ. ಕರ್ನಾಟಕ, ತಮಿಳುನಾಡಿನಲ್ಲಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. ಕಣ್ಣೂರು, ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ, ರೋಗಿಗಳಿಗೆ ಏಕೈಕ ಆಶ್ರಯವೇ ಪ್ಯಾಸೆಂಜರ್‌ ರೈಲುಗಳು. ಆದರೆ ಸದ್ಯ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಸಾಮಾನ್ಯ ಬೋಗಿಗಳು ಇಲ್ಲದೇ ಇಲ್ಲದಿರುವುದು ಹಾಗೂ ಕೆಲವು ಸ್ಟೇಷನ್‌ಗಳಲ್ಲಿ ನಿಲುಗಡೆ ಇಲ್ಲದಿರುವುದು ವಿದ್ಯಾರ್ಥಿಗಳಿಗೆ ತೊಂದರೆ ಉಂಟು ಮಾಡಿದೆ.

ಮುಂಗಡ ಟಿಕೆಟ್ ಲಭಿಸದ ಇರುವುದರಿಂದ ಹಲವಾರು ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿದ್ದಾರೆ. ಬಹುತೇಕ ಬಡ ಮತ್ತು ಸಾಮಾನ್ಯ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಮತ್ತು ಹಾಸ್ಟೆಲ್ ವೆಚ್ಚವನ್ನು ಭರಿಸಲಾಗುವುದಿಲ್ಲ. ದೂರದ ಎಸಿ ಮತ್ತು ನಾನ್ ಎಸಿ ಬಸ್ ಸೇವೆಗಳನ್ನು ಸಹ ಮತ್ತೆ ಆರಂಭಿಸಲಾಗಿದೆ. ಆದರೆ ರೈಲು ಸಂಚಾರ ಮಾತ್ರ ಸ್ಥಗಿತಗೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಶ್ರೀಕಾಂತ್ ಹೇಳಿದ್ದಾರೆ.

ಕೂಡಲೇ ಪ್ಯಾಸೆಂಜರ್‌ ರೈಲುಗಳ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ಕೇರಳ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು