ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ಗೆ ಪಾಕಿಸ್ತಾನ, ಬಾಂಗ್ಲಾದೇಶದ ವ್ಯಾಮೋಹ ಏಕೆ? ಕ್ಯಾಪ್ಟನ್ ಬ್ರಿಜೇಶ್

ಬಂಟ್ವಾಳ: ಬಿಜೆಪಿ ಕಾರ್ಯಕಾರಿಣಿ ಸಭೆ, ಅಭಿನಂದನಾ ಕಾರ್ಯಕ್ರಮ
Published 20 ಆಗಸ್ಟ್ 2024, 15:38 IST
Last Updated 20 ಆಗಸ್ಟ್ 2024, 15:38 IST
ಅಕ್ಷರ ಗಾತ್ರ

ಬಂಟ್ವಾಳ: ದೇಶದಲ್ಲಿ ಹಿಂದುತ್ವದ ಧ್ವನಿಯಾಗುವುದರ ಜತೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ಮೂರನೇ ಬಾರಿ ಬಹುಮತದ ಕೇಂದ್ರ ಸರ್ಕಾರ ಅಸ್ತಿತ್ವಗೊಂಡಿದೆ. ಆದರೆ, ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಜನರ ಬದುಕಿಗೇ ಗ್ಯಾರಂಟಿ ಇಲ್ಲದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದ್ದಾರೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.

ಇಲ್ಲಿನ ಬಿ.ಸಿ.ರೋಡಿನಲ್ಲಿ ಮಂಗಳವಾರ ನಡೆದ ಬಿಜೆಪಿ ಕಾರ್ಯಕಾರಿಣಿ ವಿಶೇಷ ಸಭೆ ಮತ್ತು ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

‘ಭ್ರಷ್ಟ ಮುಖ್ಯಮಂತ್ರಿಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಜಿಲ್ಲೆಯ ಜನತೆ ತಲೆ ತಗ್ಗಿಸುವಂತೆ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಅನುದಾನ ನೀಡುವ ಬದಲಾಗಿ ಕೇವಲ ಪಾಕಿಸ್ತಾನ ಮತ್ತು ಬಾಂಗ್ಲಾ ದೇಶದ ಬಗ್ಗೆ ಕಾಂಗ್ರೆಸ್‌ಗೆ ವ್ಯಾಮೋಹ ಏಕೆ ಎನ್ನುವುದೇ ಅರ್ಥವಾಗುವುದಿಲ್ಲ’ ಎಂದು ಅವರು ಟೀಕಿಸಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ₹ 29 ಕೋಟಿ ವೆಚ್ಚದಲ್ಲಿ ಬಂಟ್ವಾಳ ನ್ಯಾಯಾಲಯ ಕಟ್ಟಡ ನಿರ್ಮಾಣಗೊಳ್ಳಲಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಭ್ರಷ್ಟ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ರಾಜೀನಾಮೆ ನೀಡುವ ವರೆಗೆ ಹೋರಾಟ ನಡೆಸಲಿದೆ ಎಂದರು.

ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿದರು. ಪ್ರಮುಖರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರೇಮಾನಂದ ಶೆಟ್ಟಿ, ಕೆ.ಹರಿಕೃಷ್ಣ ಬಂಟ್ವಾಳ್, ಮಾಧವ ಎಸ್.ಮಾವೆ, ಸುಲೋಚನಾ ಜಿ.ಕೆ.ಭಟ್, ಯತೀಶ್ ಆಳ್ವ, ಪೂಜಾ ಪೈ, ದೇವಪ್ಪ ಪೂಜಾರಿ, ದಿನೇಶ ಅಮ್ಟೂರು, ಬಿ.ದೇವದಾಸ ಶೆಟ್ಟಿ, ನಂದನ್ ಮಲ್ಯ, ಜಗದೀಶ್ ಶೇಣವ, ಸಂದೇಶ ಶೆಟ್ಟಿ, ವಿಕಾಸ್ ಪುತ್ತೂರು, ಬಿ.ದಿನೇಶ ಭಂಡಾರಿ, ಜನಾರ್ದನ ಬೊಂಡಾಲ, ಪ್ರಸನ್ನ ಮಾಡ್ತ, ಸುದರ್ಶನ ಬಜ, ದಿನೇಶ ಶೆಟ್ಟಿ ದಂಬೆದಾರು, ಸವಿತಾ ಶೆಟ್ಟಿ ಬಡಗಬೆಳ್ಳೂರು, ಯಶೋಧರ ಕರ್ಬೆಟ್ಟು, ಜೀವನ್ ಪಿಂಟೊ, ವೇದಾನಂದ ಕಾರಂತ್ ಭಾಗವಹಿಸಿದ್ದರು.

ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿ, ರಶ್ಮಿತ್ ಶೆಟ್ಟಿ ವಂದಿಸಿದರು. ರಾಜೇಶ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT