ತಲಪಾಡಿ ಟೋಲ್ ಬಳಿ ವಿಜಯೋತ್ಸವದ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ, ಲಾಠಿ ಪ್ರಹಾರ

ಬುಧವಾರ, ಜೂನ್ 19, 2019
26 °C
ತಲಪಾಡಿಯಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

ತಲಪಾಡಿ ಟೋಲ್ ಬಳಿ ವಿಜಯೋತ್ಸವದ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ, ಲಾಠಿ ಪ್ರಹಾರ

Published:
Updated:

ಮಂಗಳೂರು: ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿರಾಜ್ ಮೋಹನ್ ಉಣ್ಣಿತ್ತಾನ್ ಗೆಲುವಿನ ಸಂಭ್ರಮದಲ್ಲಿ ವಿಜಯೋತ್ಸವ ಆಚರಣೆ ವೇಳೆ ಶನಿವಾರ ಸಂಜೆ ತಲಪಾಡಿ ಟೋಲ್ ಗೇಟ್ ಬಳಿ ಕರ್ನಾಟಕದ ಗಡಿ ಒಳಗೆ ಬಂದು ಮುಸ್ಲಿಂ ಲೀಗ್ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಅವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಮೊದಲು ನಾಲ್ಕು ಬೈಕ್ ಗಳಲ್ಲಿ ಮುಸ್ಲಿಂ ಲೀಗ್ ಬಾವುಟದೊಂದಿಗೆ ರಾಜ್ಯದ ಗಡಿಯೊಳಕ್ಕೆ ಬಂದ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು.‌ ಸ್ಥಳಕ್ಕೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ತಕ್ಷಣ 50 ಬೈಕ್ ಗಳಲ್ಲಿ ಅಲ್ಲಿಗೆ ಬಂದ ಮುಸ್ಲಿಂ ಲೀಗ್ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಬೈಕ್ ಗಳು ಮತ್ತು ಮುಸ್ಲಿಂ ಲೀಗ್ ಪಕ್ಷದ ಬಾವುಟಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಕೇರಳ ಪೊಲೀಸರೂ ಸ್ಥಳಕ್ಕೆ ಬಂದಿದ್ದು, ಚರ್ಚೆ ನಡೆಸುತ್ತಿದ್ದಾರೆ.


ಬಸ್‌ನ ಗಾಹು ಪುಡಿಯಾಗಿದೆ

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 2

  Frustrated
 • 9

  Angry

Comments:

0 comments

Write the first review for this !