ಬುಧವಾರ, ಮಾರ್ಚ್ 29, 2023
30 °C

ಬೀದಿನಾಯಿಗೆ ಗುಂಡು ಹಾರಿಸಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದ ಶಿವಭಾಗ್ ಸಮೀಪದ ಗುರುವಾರ ತಡರಾತ್ರಿ ವೇಳೆ ಬೀದಿನಾಯಿಗೆ ಗುಂಡು ಹೊಡೆದು ಕೊಲೆ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಘಟನೆಯ ನಂತರ ಸ್ಥಳಕ್ಕೆ ತೆರಳಿದ್ದ ಅನಿಮಲ್ ಕೇರ್ ಟ್ರಸ್ಟ್ ಕಾರ್ಯಕರ್ತರು ಮೃತ ನಾಯಿಯನ್ನು ಆಂಬುಲೆನ್ಸ್ ಮೂಲಕ ನಗರದ ಜೈಲು ರಸ್ತೆಯ ಪಶು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಾಯಿಯ ದೇಹದಲ್ಲಿ ಏರ್‌ಗನ್‌ನ ಬುಲೆಟ್ ದೊರೆತಿದೆ. ಈ ಬಗ್ಗೆ ಅನಿಮಲ್ ಕೇರ್ ಟ್ರಸ್ಟ್‌ನ ಮುಖ್ಯಸ್ಥೆ ಸುಮಾ ಅವರು ಕದ್ರಿ ಠಾಣೆಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಮಾ ರಮೇಶ್, ಇದೊಂದು ಅಮಾನವೀಯ ಕೃತ್ಯ. ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.

₹20 ಲಕ್ಷದ ಚಿನ್ನ ವಶ

ಮಂಗಳೂರು: ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ ₹20.89 ಲಕ್ಷ ಮೌಲ್ಯದ ಚಿನ್ನವನ್ನು ಶುಕ್ರವಾರ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕನನ್ನು ತಪಾಸಣೆಗೆ ಒಳಪಡಿಸ ಲಾಗಿತ್ತು. ಈ ವೇಳೆ ಆರೋಪಿಯು 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ, ಗಮ್‌ನೊಂದಿಗೆ ಸೇರಿಸಿ, ಗುದನಾಳದಲ್ಲಿ ಇಟ್ಟು ಸಾಗಣೆ ಮಾಡು ತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಸ್ಟಮ್ಸ್‌ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ ಚಕ್ರವರ್ತಿ ಕಾರ್ಯಾಚರಣೆ ನಡೆಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.