ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಜಿರೆ: ವಿದ್ಯಾರ್ಥಿನಿ ಆತ್ಮಹತ್ಯೆ

Published 4 ಜುಲೈ 2024, 13:37 IST
Last Updated 4 ಜುಲೈ 2024, 13:37 IST
ಅಕ್ಷರ ಗಾತ್ರ

ಉಜಿರೆ: ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ ಅನಿತಾ (17) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳ್ತಂಗಡಿಯ ಖಾಸಗಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕೆಲವು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ ಭಟ್ಕಳದಲ್ಲಿ

ಉಜಿರೆ: ಧರ್ಮಸ್ಥಳ ಗ್ರಾಮದ ಕನ್ಯಾಡಿಯ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಜುಲೈ 21ರಿಂದ ಆ.30ರ ವರೆಗೆ ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಚಾತುರ್ಮಾಸ ವ್ರತಾಚರಣೆ ನಡೆಸಲಿದ್ದಾರೆ.

ಕಾರ್ಯಕ್ರಮವನ್ನು ಜುಲೈ 31ರಂದು ಬೆಳಿಗ್ಗೆ 11ಕ್ಕೆ ಸಚಿವ ಮಂಕಾಳ್ ಎಸ್.ವೈದ್ಯ ಉದ್ಘಾಟಿಸುವರು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿಕ್ಷಣ ಸಚಿವ ಮಧುಬಂಗಾರಪ್ಪ ಭಾಗವಹಿಸುವರು. ಪ್ರತಿ ದಿನ ಧಾರ್ಮಿಕ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಜಲಪಾತ, ಗಡಾಯಿಕಲ್ಲು ಚಾರಣ ನಿರ್ಬಂಧ

ಉಜಿರೆ: ಭಾರಿ ಮಳೆಯಿಂದಾಗಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಬಂಡಾಜೆ, ಎರ್ಮಾಯಿ, ಕಡಮಗುಂಡಿ, ಎಳನೀರು ಮೊದಲಾದ ಜಲಪಾತಗಳಿಗೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಸ್ವಾತಿ ತಿಳಿಸಿದ್ದಾರೆ.

ಜಮಾಲಾಬಾದ್ (ಗಡಾಯಿಕಲ್ಲು) ಪ್ರದೇಶದಲ್ಲಿ ಚಾರಣಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT