ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಕುಂಜ: ಗೂಡ್ಸ್ ವಾಹನ ಡಿಕ್ಕಿ, ಬೈಕ್ ಸವಾರ ಸಾವು

Published 5 ಮಾರ್ಚ್ 2024, 13:42 IST
Last Updated 5 ಮಾರ್ಚ್ 2024, 13:42 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರ ರಾತ್ರಿ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ, ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಎಂಬುವರ ಪುತ್ರ ಶ್ರೀಜಿಸ್ (20) ಮೃತ ವಿದ್ಯಾರ್ಥಿ.

ಶ್ರೀಜಿಸ್ ರಾಮಕುಂಜ ಶಾರದಾನಗರದಲ್ಲಿರುವ ತನ್ನ ಚಿಕ್ಕಮ್ಮ, ಅಂಗನವಾಡಿ ಕಾರ್ಯಕರ್ತೆ ಯಮುನಾ ಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಬಾರ್ಯಕ್ಕೆ ಹೋಗುವ ಸಲುವಾಗಿ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನ ಡಿಕ್ಕಿಯಾಗಿದೆ.

ಶ್ರೀಜಿಸ್‌ಗೆ ತಂದೆ, ತಾಯಿ, ಇಬ್ಬರು ಸಹೋದರರು ಇದ್ದಾರೆ.

ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT