ಶನಿವಾರ, ಅಕ್ಟೋಬರ್ 1, 2022
23 °C

ಬೆಳ್ತಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ತಾಲ್ಲೂಕಿನ ನೆರಿಯಾ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಮಂಗಳವಾರ ಹೃದಯಘಾತದಿಂದ ಮನೆಯಲ್ಲಿ ಮೃತಪಟ್ಟಿದ್ದಾನೆ.

ಮುಂಡಾಜೆ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ.

ಮಂಗಳವಾರ ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು.

ಅವಳಿ ಮಕ್ಕಳ ಪೈಕಿ ಒಬ್ಬನಾಗಿದ್ದ ಈತನಿಗೆ ತಂದೆ, ತಾಯಿ, ಹಾಗೂ ಇಬ್ಬರು ಸಹೋದರರು ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು