ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಅನುಚಿತ ವರ್ತನೆಯ ವಿಡಿಯೊ ವೈರಲ್

ಪೊಲೀಸರಿಂದ ತನಿಖೆ ಆರಂಭ: ಪೊಲೀಸ್ ಕಮಿಷನರ್ ಶಶಿಕುಮಾರ್
Last Updated 21 ಜುಲೈ 2022, 10:24 IST
ಅಕ್ಷರ ಗಾತ್ರ

ಮಂಗಳೂರು: ನಗರದ ಅಪಾರ್ಟ್‍ಮೆಂಟ್ವೊಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಅನುಚಿತವಾಗಿ ವರ್ತಿಸಿರುವ ವಿಡಿಯೊವೊಂದು ವೈರಲ್ ಆಗಿದೆ.

ಈ ವಿಡಿಯೊಗೆ ಸಂಬಂಧಿಸಿ ಪರಿಶೀಲಿಸಲಾಗುತ್ತಿದ್ದು, ವಿಡಿಯೊ ಮಾಡಿರುವ ವಿದ್ಯಾರ್ಥಿಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಅವರು, ಈ ಘಟನೆ ಕಳೆದ ಜನವರಿಯಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದರು.

ಈ ವಿಡಿಯೊ ವಿಚಾರ ಕಾಲೇಜಿನ ಆಡಳಿತ ಮಂಡಳಿ ಗಮನಕ್ಕೆ ಬಂದಿದ್ದು, ಕಾಲೇಜಿನ ಶಿಸ್ತುಪಾಲನಾ ಸಮಿತಿಯ ಆಂತರಿಕ ತನಿಖೆಯ ಬಳಿಕ ವಿಡಿಯೊದಲ್ಲಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ಕಾಲೇಜು ಆಡಳಿತ ಮಂಡಳಿ ಪ್ರಮುಖರು ತಿಳಿಸಿದ್ದಾರೆ.

ಮಕ್ಕಳು ಟ್ರು ಅಂಡ್ ಡೇರ್ ಎಂಬ ಆಟವಾಡುವ ವೇಳೆ ನಡೆದ ಘಟನೆ ಎಂಬುದಾಗಿ ಹೇಳಿಕೊಂಡಿದ್ದು, ಈ ವಿಡಿಯೊದಲ್ಲಿದ್ದ ವಿದ್ಯಾಥಿಯೇ ಇದನ್ನು ತನ್ನ ತರಗತಿಯ ವಾಟ್ಸ್‌ ಆ್ಯಪ್ ಗುಂಪಿಗೆ ಶೇರ್ ಮಾಡಿದ್ದ ಎನ್ನಲಾಗಿದೆ. ಇದು ತರಗತಿಯ ಸಂಯೋಜಕರ ಗಮನಕ್ಕೆ ಬಂದು ಅವರು ಪ್ರಾಂಶುಪಾಲರಿಗೆ ಮಾಹಿತಿ ನೀಡಿ ಪೋಷಕರನ್ನು ಕರೆಸಿ ಈ ಬಗ್ಗೆ ಆಂತರಿಕ ವಿಚಾರಣೆಗೊಳಪಡಿಸಿದ್ದಾಗಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೊ ಬಗ್ಗೆ ಬುಧವಾರ ತಡರಾತ್ರಿ ಪೊಲೀಸರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಘಟನೆ ಸಂದರ್ಭದಲ್ಲಿ ಅಮಲು ಪದಾರ್ಥ ಸೇವನೆ ಮಾಡಲಾಗಿತ್ತೇ ಎಂಬ ಕುರಿತು ಜತೆಗೆ ಮಕ್ಕಳ ವಯಸ್ಸು ಎಲ್ಲವನ್ನೂ ತಿಳಿದುಕೊಂಡು ಕಾನೂನು ತಜ್ಞರ ಸಲಹೆ ಪಡೆದುಕೊಂಡು ಮುಂದಿನ ಕ್ರಮ ವಹಿಸಲಾಗುವುದು ಎಂದು ಕಮಿಷನರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT