ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಡಿಪು | ಬಾರ್ ತೆರವಿಗೆ ಆಗ್ರಹ; ವಿದ್ಯಾರ್ಥಿಗಳಿಂದ ಮುತ್ತಿಗೆ

Published 13 ಜುಲೈ 2023, 13:35 IST
Last Updated 13 ಜುಲೈ 2023, 13:35 IST
ಅಕ್ಷರ ಗಾತ್ರ

ಮುಡಿಪು: ಶಾಲೆ ಬಳಿ ಆರಂಭಗೊಂಡ ಬಾರ್ ಮತ್ತು ರೆಸ್ಟೋರೆಂಟ್ ತೆರವುಗೊಳಿಸುವವರೆಗೆ ಆಮರಣಾಂತ ಸತ್ಯಾಗ್ರಹದಂಥ ಹೋರಾಟ ನಡೆಸಲು ಶಾಲಾ ಆಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ರಾಜಾರಾಮ ಭಟ್ ಹೇಳಿದರು.

ಪುಣ್ಯಕೋಟಿನಗರ ಸಮೀಪದಲ್ಲಿ ಆರಂಭವಾದ ಬಾರ್ ಮತ್ತು ರೆಸ್ಟೋರೆಂಟ್ ತೆರವುಗೊಳಿಸುವಂತೆ ಆಗ್ರಹಿಸಿ ಪುಣ್ಯಕೋಟಿ ನಗರ ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಬಾಳೆಪುಣಿ ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ನಡೆಸಿದ ಪ್ರತಿಭಟನೆ ಹಾಗೂ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ಮಾರ್ಗಸೂಚಿ ಪಾಲಿಸದೆ ಬಾರ್ ಮತ್ತು ರೆಸ್ಟೋರೆಂಟ್‌ಗೆ ಅನುಮತಿ ನೀಡಲಾಗಿದೆ. ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿದಂತೆ ಪುಣ್ಯಕೋಟಿನಗರದ ಗೋಶಾಲೆ ಹಾಗೂ ಶಾಲೆಯ ಬಳಿ ಬಾರ್ ತೆರೆಯಲು ಉದ್ದೇಶಿಸಿರುವುದು ಕಾನೂನು ವಿರೋಧಿಯಾಗಿದೆ. ನೀಡಿರುವ ಅನಮತಿ ರದ್ದುಮಾಡಬೇಕು ಎಂದು ಪಂಚಾಯಿತಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ಮನವಿ ತಿರಸ್ಕೃತಗೊಂಡರೆ ಮೇಲ್ಮನವಿ, ಸಚಿವರ ಭೇಟಿ, ಇಲಾಖೆ ಅಧಿಕಾರಿಗಳ ಭೇಟಿ, ಸತ್ಯಾಗ್ರಹ, ಆಮರಣಾಂತ ಉಪವಾಸ ಕೈಗೊಳ್ಳಲು ಸಿದ್ಧರಿದ್ದೇವೆ. ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಾಳೆಪುಣಿ ಗ್ರಾಮ ಪಂಚಾಯಿತಿ ಆಡಳಿತ ನೀಡಿದೆ. ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಾಲಾ ವಿದ್ಯಾರ್ಥಿನಿ ರಶ್ಮಿತಾ ಮಾತನಾಡಿ, ಶಾಲೆಯ ಆವರಣದ ಬಳಿ ಬಾರ್ ಆರಂಭಿಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಶಾಲೆಯ ಪರವಾಗಿ ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತ ಮಂಡಳಿಯಿಂದ ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಝರೀನಾ ಆವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT