ಸುಬ್ರಹ್ಮಣ್ಯ: ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ನಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಬೇಕು ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಕನ್ನಡ ಉಪನ್ಯಾಸಕ ಕೇಶವ ಬಂಗೇರ ಹೇಳಿದರು.
ಸುಬ್ರಹ್ಮಣ್ಯದ ಕುಕ್ಕೆ ಶ್ರೀಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟಿಸಿ ಅವರು ಮಾತನಾಡಿದರು.
ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪಸನಾ ಸಮಿತಿ ಸದಸ್ಯ ಶ್ರೀವತ್ಸ ಅಧ್ಯಕ್ಷತೆ ವಹಿಸಿದ್ದರು.
ಸುಬ್ರಹ್ಮಣ್ಯ ದೇವಸ್ಥಾನದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ದೇವಳದ ಶಿಕ್ಷಣ ಸಂಸ್ಥೆಗಳ ನಿರ್ವಾಹಕ ಶಿವಸುಬ್ರಹ್ಮಣ್ಯ ಭಟ್, ಕಾಲೇಜು ಪ್ರಾಂಶುಪಾಲ ದಿನೇಶ್ ಪಿ.ಟಿ., ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸಾಕೋಶದ ಸಂಯೋಜಕಿ ಲತಾ ಬಿ.ಟಿ., ರೇಗಪ್ಪ ಸುಬ್ರಹ್ಮಣ್ಯ, ವಿದ್ಯಾರ್ಥಿ ಪರಿಷತ್ತಿನ ಸಲಹೆಗಾರರಾದ ಪ್ರಸಾದ್ ಎನ್., ರಾಮ್ ಪ್ರಸಾದ್, ಪ್ರಮೀಳಾ, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸುಹಾಸ್.ಎಂ.ಜಿ., ಉಪಾಧ್ಯಕ್ಷೆ ಪೂಜಾ ಎಂ., ಕಾರ್ಯದರ್ಶಿ ಕೌಶಿಕ್ ಕೆ.ವಿ. ಇದ್ದರು.
ವಿದ್ಯಾರ್ಥಿ ಪರಿಷತ್ತಿನ ಸಹ ಸಲಹೆಗಾರರಾದ ಪ್ರಮೀಳ ವಿದ್ಯಾರ್ಥಿ ಪರಿಷತ್ತಿನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
ಹಲವು ವರ್ಷಗಳಿಂದ ಹಳ್ಳಿ ಮದ್ದು ನೀಡುತ್ತಿರುವ, ದೈವ ನರ್ತಕ ರೇಗಪ್ಪ ಸುಬ್ರಹ್ಮಣ್ಯ ಅವರನ್ನು, ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಶ್ರಾವ್ಯ ಮುತ್ಲಾಜೆ, ಸಿಂಧೂರ, ಕೌಸಲ್ಯ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿ ಪರಿಷತ್ತಿನ ಸಲಹೆಗಾರ ಪ್ರಸಾದ್ ಎನ್.ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಪರಿಷತ್ತಿನ ಉಪಾಧ್ಯಕ್ಷೆ ಪೂಜಾ ಎಂ. ಸ್ವಾಗತಿಸಿದರು. ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸುಹಾಸ್ ಎಂ.ಜಿ.ವಂದಿಸಿದರು. ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.