ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟ್ಲ | ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಪತ್ತೆ 

Published 22 ಆಗಸ್ಟ್ 2023, 14:17 IST
Last Updated 22 ಆಗಸ್ಟ್ 2023, 14:17 IST
ಅಕ್ಷರ ಗಾತ್ರ

ವಿಟ್ಲ: ಇಲ್ಲಿನ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ಸೋಮವಾರ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ.

ದೀಕ್ಷಿತ್ (15) ಮತ್ತು ಗಗನ್ (14) ಪತ್ತೆಯಾಗಿರುವ ವಿದ್ಯಾರ್ಥಿಗಳು. ಅವರು ಆ.21ರಂದು ಶಾಲೆಗೆಂದು ವಿದ್ಯಾರ್ಥಿ ನಿಲಯದಿಂದ ತೆರಳಿದವರು ನಾಪತ್ತೆಯಾಗಿದ್ದರು. ಈ ಬಗ್ಗೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಪ್ರಮೀಳಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ವಿಟ್ಲ ಪೊಲೀಸರು ವಿದ್ಯಾರ್ಥಿಗಳನ್ನು ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ. ಹಾಸ್ಟೆಲ್‌ನಲ್ಲಿ ನಿಲ್ಲಲು ಇಷ್ಟವಾಗದ ಕಾರಣ ದೀಕ್ಷಿತ್‌ ಮತ್ತು ಗಗನ್ ಮನೆ ಕಡೆಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಗೆ ಕರೆ ತಂದ ಪೊಲೀಸರು ಅವರ ಮನವೊಲಿಸಿ ಮತ್ತೆ ಹಾಸ್ಟೆಲ್‌ಗೆ ಕಳುಹಿಸಿಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT