ಸುಬ್ರಹ್ಮಣ್ಯ: ದೂರದ ಊರುಗಳಿಂದ ಇಲ್ಲಿನ ಕುಕ್ಕೆ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಆಟೊ ಚಾಲಕರೇ ಪ್ರಥಮ ಮಾಹಿತಿದಾರರು. ಇತರೆ ಜಿಲ್ಲೆ, ರಾಜ್ಯಗಳಿಂದ ಬರುವ ಭಕ್ತರಿಗೆ ಕ್ಷೇತ್ರದ ಬಗ್ಗೆ ವಿವರವಾದ ಮಾಹಿತಿ ನೀಡುವ ಅವರ ಸೇವೆ ಅನನ್ಯ. ಮುಂದಿನ ದಿನಗಳಲ್ಲಿ ಆಟೊ ಚಾಲಕರ ಮಕ್ಕಳು ವಿಮಾನದ ಪೈಲೆಟ್ ಆಗಬೇಕು ಎಂದು ಶಾಸಕಿ ಭಾಗಿರತಿ ಮರುಳ್ಯ ಹೇಳಿದರು.

ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದ ಬಳಿ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಆಟೊನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಸುಬ್ರಹ್ಮಣ್ಯ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಾಜೇಶ್ ಎನ್.ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಸುಬ್ರಹ್ಮಣ್ಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವೆಂಕಟೇಶ ಎಚ್.ಎಲ್., ಗ್ರಾ.ಪಂ.ಮಾಜಿ ಸದಸ್ಯ ಗಿರೀಶ್ ಪೈಲಾಜೆ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂಧನ ಓಡೋಳಿ, ಆಟೊ ಚಾಲಕ ಸಂಘದ ಗೌರವಾಧ್ಯಕ್ಷ ಗಿರಿಧರ ಹೊಸಳ್ಳಿಕೆ, ಕುಕ್ಕೆಶ್ರೀ ಆಟೊ ಚಾಲಕರ ಸಂಘದ ಅಧ್ಯಕ್ಷ ಭುವನೇಶ್, ಬಿಎಂಎಸ್ ಆಟೊ ಚಾಲಕ ಸಂಘದ ಅಧ್ಯಕ್ಷ ಕಿರಣ ಪೈಲಾಜ್, ಎರಡೂ ಸಂಘದ ಕಾರ್ಯದರ್ಶಿಗಳು, ಕುಕ್ಕೆ ಶ್ರೀಆಟೊ ಚಾಲಕರ ಸಂಘದ ಗೌರವಾಧ್ಯಕ್ಷ ಉಮೇಶ್ ಕೆ.ಎನ್ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯ ದಿಲೀಪ್ ಉಪ್ಪಳಿಕೆ ಸ್ವಾಗತಿಸಿದರು. ಹೇಮಕರ ನಿರೂಪಿಸಿದರು. ಚಿಂತನ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-29-804975392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.