ಸುಬ್ರಹ್ಮಣ್ಯ: ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ.

ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬುವರ ಪುತ್ರ ವಿನ್ಯಾಸ್ (23) ಮೃತಪಟ್ಟವರು.

ಅವರಿಗೆ ತಾಯಿ, ಸಹೋದರಿ ಇದ್ದಾರೆ.

ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ವಿನ್ಯಾಸ್ ಅವರ ದ್ವಿಚಕ್ರ ವಾಹನ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತಕ್ಕೀಡಾಗಿದೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿನ್ಯಾಸ್ ಅವರು ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ತಂದೆ ಇತ್ತೀಚೆಗೆ ನಿಧನರಾಗಿದ್ದರು ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.