ಸುಬ್ರಹ್ಮಣ್ಯ: ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನಾರೋಗ್ಯಕ್ಕೆ ತುತ್ತಾದ ಭಕ್ರು ಅಥವಾ ತೀವ್ರತರದ ಆರೋಗ್ಯದ ತೊಂದರೆ ಎದುರಿಸುವ ಭಕ್ತರ ಅನುಕೂಲಕ್ಕಾಗಿ 24x7 ತುರ್ತು ಚಿಕಿತ್ಸಾ ಘಟಕ ಆರಂಭಿಸಬೇಕು ಎಂದು ಒತ್ತಾಯಿಸಿ ಶನಿವಾರ ಸುಬ್ರಹ್ಮಣ್ಯದ ಶಿವರಾಮ ರೈ ಅವರ ನೇತೃತ್ವದಲ್ಲಿ ನಿಯೋಗವು ಮಂಗಳೂರಿನಲ್ಲಿ ಆರೋಗ್ಯ ಸಚಿವರಿಗೆ ಮನವಿ ನೀಡಿ ಒತ್ತಾಯಿಸಿದೆ.

ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತರು ಬಂದು ಇಲ್ಲಿಯ ಸೇವೆಗಳಾದ ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮುಂತಾದ ಸೇವೆಗಳನ್ನು ಪೂರೈಸಿ ತೆರಳುತ್ತಾರೆ. ಆದರೆ ಇಲ್ಲಿ ಅನಾರೋಗ್ಯಕ್ಕೆ ತುತ್ತಾದ ಭಕ್ತರಿಗೆ ಅಥವಾ ತೀವ್ರತರದ ಆರೋಗ್ಯದ ತೊಂದರೆ ಸಂಭವಿಸಿದಾಗ 24x7 ತುರ್ತು ಚಿಕಿತ್ಸಾ ಘಟಕ ಇಲ್ಲದೆ ಈ ಹಿಂದೆ ಹಲವು ಮರಣಗಳು ಸಂಭವಿಸಿವೆ. ಈ ಸಂಬಂಧ ಹಲವು ಬಾರಿ ಸಂಬಂಧ ಪಟ್ಟವರಿಗೆ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಪ್ರಯೋಜನವಾಗಿಲ್ಲ. ಹಾಗಾಗಿ ಆರೋಗ್ಯ ಸಚಿವರು ಇದರ ಬಗ್ಗೆ ಕೂಡಲೇ ಗಮನ ಹರಿಸಿ ಇಲ್ಲಿಗೆ 24x7 ತುರ್ತು ಚಿಕಿತ್ಸಾ ಘಟಕವನ್ನು ವ್ಯವಸ್ಥೆ ಮಾಡಬೇಕು ಎಂದು ನಿಯೋಗವು ಮನವಿ ಮಾಡಿದೆ.

ಮನವಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೀಘ್ರದಲ್ಲಿ 24x7 ತುರ್ತು ಚಿಕಿತ್ಸಾ ಘಟಕವನ್ನು ಆರಂಭಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ನಿಯೋಗವು ತಿಳಿಸಿದೆ.

ನಿಯೋಗದಲ್ಲಿ ರಾಜೇಶ್ ಎನ್.ಎಸ್., ಡಾ.ಶಿವಕುಮಾರ್ ಹೊಸಳಿಕೆ, ಡಾ.ರವಿ ಕಕ್ಕೆ ಪದವು, ಪವನ್ ಎಂ.ಡಿ, ಚಂದ್ರಶೇಖರ ನಾಯರ್, ಸುಬ್ರಹ್ಮಣ್ಯ ಅತ್ಯಾಡಿ, ಲೋಕೇಶ ಬಿ.ಎನ್., ಭರತ್ ಮುಂತಾದವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-29-5388639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.