ಸುಬ್ರಹ್ಮಣ್ಯ: ಹರಿಹರ ಪಳ್ಳತ್ತಡ್ಕ ಗ್ರಾಮದ ಹರಿಹರೇಶ್ವರ ದೇವಸ್ಥಾನದಲ್ಲಿ ಶನಿವಾರ 330 ಶನಿಪೂಜೆ, 170 ರುದ್ರಾಭಿಷೇಕ, ಹಾಲು-ಪಾಯಸ, ಅವಲಕ್ಕಿ-ಪಂಚಕಜ್ಜಾಯ ಮುಂತಾದ ಸೇವೆಗಳೊಂದಿಗೆ ಹೆಚ್ಚಿನ ಸಂಖ್ಯೆಯ ಭಕ್ತರು ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡರು.

ಸುಮಾರು 13 ವರ್ಷಗಳ ನಂತರ ಶನಿ ಜಯಂತಿ, ಶನಿ ಅಮಾವಾಸ್ಯೆ ಮತ್ತು ಶನಿವಾರ ಒಂದೇ ದಿನ ಬಂದಿವೆ. ಜ್ಯೋತಿಷ ಶಾಸ್ತ್ರದ ಪ್ರಕಾರ ಈ ಅಪರೂಪದ ಮಹಾ ಸಂಯೋಗವನ್ನು ‘ಮಹಾ ಶನಿ ಸಂಯೋಗ’ ಎಂದು ಕರೆಯಲಾಗುತ್ತದೆ. 2013ರ ಜೂನ್ 8ರಂದು ಮಹಾ ಶನಿ ಸಂಯೋಗ ಇತ್ತು ಎಂದು ಪ್ರಮುಖರು ತಿಳಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಡು, ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್, ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-236909839

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.