ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.

ಕಡಮಕಲ್ಲು-ಗಾಳಿಬೀಡು-ಮಡಿಕೇರಿ ರಸ್ತೆ ಮತ್ತು ತೋಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಸಹಕಾರ ನೀಡಬೇಕು. ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ ವರದಿಗಳನ್ನು ಶೀಘ್ರವಾಗಿ ಪ್ರಕಟಿಸಬೇಕು. ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರನ್ನು ಒಕ್ಕಲೆಬ್ಬಿಸದೆ ಅಲ್ಲಿ ವಾಸಿಸುವುದಕ್ಕೆ ಅವಕಾಶ ಮಾಡಿ ಹಕ್ಕುಪತ್ರ ಒದಗಿಸ ಬೇಕು ಎಂದು ಮನವಿ ಸಲ್ಲಿಸಿದರು.

ಕೃಷಿಕರ ತೋಟಗಳಿಗೆ ಇಲಾಖೆಯ ಅನುದಾನದಲ್ಲಿ ಸೋಲಾರ್ ಬೇಲಿ ನಿರ್ಮಾಣಕ್ಕೆ ಪ್ರಸ್ತುತ ಒದಗಿಸುವ ಶೇಕಡ 50–50 ಅನುದಾನದ ಬದಲಿಗೆ 75– 25ಅನುದಾನ ಒದಗಿಸಬೇಕು. ಕೃಷಿ ತೋಟಗಳಿಗೆ ಹಾನಿಯಾದ ಪರಿಹಾರ ಮೊತ್ತವನ್ನು ಹೆಚ್ಚಿಸಿ ಶೀಘ್ರ ಬಿಡುಗಡೆಗೊಳಿಸಿ ಸಂಕಷ್ಟದಲ್ಲಿರುವ ರೈತರಿಗೆ ನೇರವಾಗಬೇಕು ಎಂದು ಮನವಿ ಸಲ್ಲಿಸಿದರು.

ಕೇಂದ್ರಿಯ ರಬ್ಬರ್ ಮಂಡಳಿ ನಿರ್ದೇಶಕ ಮುಳಿಯ ಕೇಶವ ಭಟ್, ಪ್ರಮುಖರಾದ ಕೃಷ್ಣಯ್ಯ ಮೂಲೆತೋಟ, ರಾಕೇಶ ಮೆಟ್ಟಿನಡ್ಕ, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-29-546487135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.