ಮಂಗಳವಾರ, ಸೆಪ್ಟೆಂಬರ್ 28, 2021
21 °C

ಮಾಜಿ ಕೇಂದ್ರ ಸಚಿವ ಆಸ್ಕರ್‌ ಫರ್ನಾಂಡಿಸ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮಂಗಳೂರು: ಯೋಗ ಮಾಡುವ ಸಂದರ್ಭ ಬಿದ್ದು ತಲೆಗೆ ಏಟಾಗಿ ಯೇನೆಪೋಯ ಆಸ್ಪತ್ರೆಯಲ್ಲಿ ಕಳೆದೊಂದು ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್​ ಅವರಿಗೆ (80) ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಆಸ್ಕರ್ ಫರ್ನಾಂಡಿಸ್​ರ ತಲೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮಿದುಳಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿದೆ. ಕಳೆದ ಒಂದು ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರಿಗೆ ಡಾ. ದಿವಾಕರ್ ರಾವ್, ಡಾ ಸುನಿಲ್ ಶೆಟ್ಟಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ರಕ್ತ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿರುವುದರಿಂದ ಅವರಿಗೆ ಶೀಘ್ರ ಪ್ರಜ್ಞೆ ಮರಳುವ ನಿರೀಕ್ಷೆ ಇದೆ.

ಜುಲೈ 18 ರಂದು ಬೆಳಿಗ್ಗೆ ಯೋಗ ಮಾಡುವ ಸಂದರ್ಭ‌ ಆಸ್ಕರ್ ಫರ್ನಾಂಡಿಸ್ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಯಾವುದೇ ಗಾಯವಾಗಿಲ್ಲವೆಂದು ಇದನ್ನು ನಿರ್ಲಕ್ಷಿಸಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಯೇನೆಪೊಯ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಸದ್ಯ ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು