ಪುತ್ತೂರು: ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದ ಜೆರೆಕ್ಸ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದ ಕೇರಳದ ನೆಟ್ಟಿಣಿಗೆ ಗ್ರಾಮದ ಯುವತಿ ತನ್ನ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಕುಳದಪಾರೆ ಸಮೀಪದ ನಿದಿಯಡ್ಕ ನಿವಾಸಿ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾ (25) ಮೃತ ಯುವತಿ. ಆಕೆ ಈ ಹಿಂದೆ ಪುತ್ತೂರು ತಾಲ್ಲೂಕಿನ ಬಡಗನ್ನೂರು ಸರ್ಕಾರಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿಯೂ ಕೆಲಸ ಮಾಡಿದ್ದರು.

ಪ್ರಿಯಾ ಅವರಿಗೆ ವಿವಾಹ ನಿಶ್ಚಿತಾರ್ಥ ನಡೆದು ವಿವಾಹ ದಿನಾಂಕವೂ ನಿಗದಿಯಾಗಿತ್ತು. ಆದರೆ, ಕೋವಿಡ್ ಲಾಕ್ಡೌನ್ನಿಂದಾಗಿ ವಿವಾಹ ಮುಂದೂಡಲಾಗಿತ್ತು. ಮನೆಯಲ್ಲಿಯೇ ಇದ್ದ ಪ್ರಿಯಾ ತಾಯಿ ಬೀಡಿ ಬ್ರಾಂಚ್ಗೆ ತೆರಳಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಅಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.