ಮಂಗಳೂರು: ಬಜಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾದ ಸುಹಾಸ್ ಶೆಟ್ಟಿ ಮೃತದೇಹ ನಗರದ ಎ.ಜೆ.ಆಸ್ಪತ್ರೆಯಲ್ಲಿದ್ದು, ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ.

ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರ ಹೊರತಾಗಿಯೂ ಮೃತದೇಹವನ್ನು ಅವರ ಊರಾದ ಕಾರಿಂಜಕ್ಕೆ ಮೆರವಣಿಗೆಯಲ್ಲಿ ಒಯ್ಯಲು ಹಿಂದುತ್ವವಾದಿ ಸಂಘಟನೆಗಳ ಮುಖಂಡರು ಸಿದ್ಧತೆ ನಡೆಸಿದ್ದಾರೆ.

ಇದಕ್ಕಾಗಿ ವಾಹನವನ್ನು ಹೂವುಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.

ಆಸ್ಪತ್ರೆಗೆ ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ ಹಾಗೂ ರಾಜೇಶ್ ನಾಯ್ಕ್ ಉಳೇಪಾಡಿ, ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ, ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮೆರವಣಿಗೆ ವೇಳೆ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಂದೋಬಸ್ತ್ಗೆ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.
.ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ.ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 5ರವರೆಗೆ ನಿಷೇಧಾಜ್ಞೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.