ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಮೇ 2ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂದ್ಗೆ ಕರೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕುಂಟಿಕಾನ ಎ.ಜೆ. ಆಸ್ಪತ್ರೆಯ ಹೊರಾಂಗಣದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡುವಾಗ ಶರಣ್ ಪಂಪ್ವೆಲ್, ಮೇ 2ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಿದ್ದಲ್ಲದೆ, ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅಂಗಡಿಗಳು ಮುಚ್ಚಿದ್ದರೂ, ವಾಹನ ಸಂಚಾರ ಎಂದಿನಂತೆ ಇತ್ತು. ಈ ವೇಳೆ ಶರಣ್ ಅನುಯಾಯಿಗಳು ನಗರದ ವಿವಿಧ ಪ್ರದೇಶಗಳಲ್ಲಿ ಬಸ್ಗೆ ಕಲ್ಲು ತೂರಾಟ ನಡೆಸಿ, ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡಿ, ಸಾರ್ವಜನಿಕ ಆಸ್ತಿ–ಪಾಸ್ತಿಗೆ ನಷ್ಟ ಉಂಟು ಮಾಡಿದ್ದಾರೆ. ಇದರಿಂದ ಎರಡು ಕೋಮುಗಳ ನಡುವೆ ಸಂಘರ್ಷ, ಸಾರ್ವಜನಿಕ ಅಶಾಂತಿ ಉಂಟಾದ ಕಾರಣ ಪ್ರಕರಣ ದಾಖಲಿಸಲಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಶರಣ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 353 (2)(ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ), 196 (1)ಬಿ (ಧರ್ಮಗಳ ನಡುವೆ ದ್ವೇಷ ಪ್ರಚೋದಿಸುವುದು), 324(2)(4)(5) (ಕಿಡಿಗೇಡಿತನ, ಸಾರ್ವಜನಿಕವಾಗಿ ನಷ್ಟ ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತೆ 3 ಪ್ರಕರಣ: ಕೋಮುದ್ವೇಷದ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಆರೋಪದ ಮೇರೆಗೆ ಪೊಲೀಸರು ಮತ್ತೆ ಮೂರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.