ಮಂಗಳೂರು: ಬಜರಂಗ ದಳದ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಶನಿವಾರ ದಾಳಿ ನಡೆಸಿದ್ದಾರೆ.

ಈ ವೇಳೆ 11 ಮೊಬೈಲ್ ಫೋನ್ಗಳು, 13 ಸಿಮ್ ಕಾರ್ಡ್ಗಳು, ಎಂಟು ಮೆಮರಿ ಕಾರ್ಡ್ಗಳು ಸೇರಿದಂತೆ ಹಲವಾರು ಡಿಜಿಟಲ್ ಡಿವೈಸ್ಗಳು, ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದ 18ಕ್ಕೂ ಹೆಚ್ಚು ಕಡೆಗಳಲ್ಲಿ ಶೋಧ ನಡೆಸಲಾಗಿದೆ. ಪ್ರಕರಣದಲ್ಲಿ ಬಂಧಿತರಾಗಿರುವ 12 ಜನರ ಮನೆಗಳಲ್ಲಿ ಶೋಧ ಕಾರ್ಯ ನಡೆದಿದೆ, ಜೊತೆಗೆ, ಕೆಲವು ಶಂಕಿತರ ಮನೆಗಳಲ್ಲೂ ಪರಿಶೀಲನೆ ನಡೆಸಲಾಗಿದೆ ಎಂದು ಎನ್ಐಎ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಎನ್ಐಎ ಅಧಿಕಾರಿಗಳ ತಂಡವು, ಬಜಪೆ ಹಾಗೂ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ 10ಕ್ಕೂ ಹೆಚ್ಚು ಕಡೆಗಳಲ್ಲಿ ಶೋಧ ನಡೆಸಿದೆ. ಕೆಲವು ಎಸ್ಡಿಪಿಐ ಮುಖಂಡರ ಮನೆಗಳಲ್ಲೂ ಶೋಧ ಕಾರ್ಯ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬಜಪೆ ಸಮೀಪ ಕಿನ್ನಿಪದವು ಎಂಬಲ್ಲಿ ಮೇ 1ರಂದು ಸುಹಾಸ್ ಶೆಟ್ಟಿ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಅವರ ಮೇಲೆ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದ್ದರು. ಈ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ಗೃಹ ಸಚಿವಾಲಯವು ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಜೂನ್ 7ರಂದು ಆದೇಶ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.