ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಡುಬಿದಿರೆ | ಯುವತಿ ಆತ್ಮಹತ್ಯೆ

Published 18 ಮೇ 2024, 14:38 IST
Last Updated 18 ಮೇ 2024, 14:38 IST
ಅಕ್ಷರ ಗಾತ್ರ

ಮೂಡುಬಿದಿರೆ: ಒಂಟಿಕಟ್ಟೆ ಸಮೀಪದ ನಾಗರಕಟ್ಟೆಯ ತನ್ನ ಮನೆಯಲ್ಲಿ ಯುವತಿಯೊಬ್ಬರು ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಡುಬಿದಿರೆ ಪಟ್ಟಣದಲ್ಲಿ ಫಾಸ್ಟ್ ಫುಡ್ ಕ್ಯಾಂಟೀನ್ ನಡೆಸುತ್ತಿದ್ದ ನಾಗರಕಟ್ಟೆಯ ಹರೀಶ್ ಕೋಟ್ಯಾನ್ ಅವರ ಪುತ್ರಿ ಶರಣ್ಯ (19) ಆತ್ಮಹತ್ಯೆ ಮಾಡಿಕೊಂಡವರು.

ಮೂಲ್ಕಿಯಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾಭ್ಯಾಸ ಮಾಡಿದ್ದಳು. ಆಕೆಯ ಮನೆಯವರು ವಿದ್ಯಾಭ್ಯಾಸವನ್ನು ಅರ್ಧದಲ್ಲಿ ಮೊಟಕುಗೊಳಿಸಿದ್ದರಿಂದ ನಾಲ್ಕು ತಿಂಗಳಿನಿಂದ ಮನೆಯಲ್ಲೇ ಇದ್ದಳು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT