ಸುಳ್ಯ: ಮಳೆಗಾಲದ ತುರ್ತು ಸಂದರ್ಭ ತಾಲ್ಲೂಕು ಮಟ್ಟದ ಅಧಿ ಕಾರಿಗಳು ಸಂಘಟಿತರಾಗಿ ಕೆಲಸ ನಿರ್ವಹಿಸಿ ಪ್ರಾಕೃತಿಕ ವಿಕೋಪ ದಿಂದ ಉಂಟಾ ಗಬಹುದಾದ ಅನಾಹುತ ಗಳಿಂದ ಜನ– ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದು ಸುಳ್ಯ ತಹಶೀ ಲ್ದಾರ್ ಮಂಜುಳಾ ಎಂ. ಅಧಿಕಾರಿಗಳಿಗೆ ಸೂಚಿಸಿದರು.

ಸುಳ್ಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿರಬೇಕು. ಸಮಸ್ಯೆ ಮಾಹಿತಿಯನ್ನು ತಾಲ್ಲೂಕು ಆಡಳಿತದ ಗಮನಕ್ಕೆ ತರಬೇಕು ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿ, ಪಂಚಾಯಿತಿ ಆಡಳಿತ ಅಧಿಕಾರಿಗಳು ಕಾರ್ಯಪಡೆ ಕಮಾಂಡರ್ಗಳಾಗಿ ಕಾರ್ಯಾಚರಿಸಲಿದ್ದು, ಪಂಚಾಯಿತಿ ಮಟ್ಟದಲ್ಲಿ ಸಭೆ ಕರೆದು ಆ ಸಭೆಯ ವರದಿ ನೀಡಬೇಕು ಎಂದು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ, ಪಶು ಸಂಗೋಪನಾ ಅಧಿಕಾರಿ, ಲೋಕೋ ಪಯೋಗಿ ಅಧಿಕಾರಿ, ಸುಳ್ಯ ತಾಲ್ಲೂಕು ಕಂದಾಯ ನಿರೀಕ್ಷಕರು ಇದ್ದರು. ಉಪತಹಶೀಲ್ದಾರ್ ಚಂದ್ರಕಾಂತ್ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-1889470180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.