ಮಂಗಳವಾರ, ಜುಲೈ 27, 2021
22 °C
ತಂದೆಯಿಂದ ಮಗಳ ಮೇಲೆ ಅತ್ಯಾಚಾರ ಯತ್ನ

ಪುತ್ತೂರು: 5 ವರ್ಷ ಜೈಲು ಶಿಕ್ಷೆ, ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುತ್ತೂರು: 2015ರ ಮೇ 24ರಂದು ಸುಳ್ಯ ತಾಲ್ಲೂಕಿನ ಮನೆಯೊಂದರಲ್ಲಿ ಮಲಗಿದ್ದ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೋಕ್ಸೊ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಆರೋಪಿಗೆ ಜೈಲು‌ ಶಿಕ್ಷೆ ವಿಧಿಸಿದ್ದಾರೆ‌.

ಆರೋಪಿಯು ಪುತ್ರಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಘಟನೆ ಬಗ್ಗೆ ಬಾಲಕಿಯ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಸುಳ್ಯ ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿದ್ದ ಬಿ.ಎಸ್.ಸತೀಶ್‌ ತನಿಖೆ ನಡೆಸಿ, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪರಾಧಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹ 25,000 ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಶಿಕ್ಷೆ ವಿಧಿಸಿದೆ. ಆರೋಪಿಯು ಬಾಲಕಿಯ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದ ಅಪರಾಧಕ್ಕೆ 4 ತಿಂಗಳ ಸಾದಾ ಶಿಕ್ಷೆ ಮತ್ತು ₹ 1,000 ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 1 ತಿಂಗಳ ಶಿಕ್ಷೆ ವಿಧಿಸಿದೆ. ಬಾಲಕಿಯ ತಾಯಿಗೆ ಹಲ್ಲೆ ಮಾಡಿದ ಅಪರಾಧಕ್ಕೆ 4 ತಿಂಗಳ ಜೈಲು ಮತ್ತು ₹ 500 ದಂಡ, ದಂಡ ತೆರಲು ತಪ್ಪಿದ್ದಲ್ಲಿ 15 ದಿವಸಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ದಂಡದ ಮೊತ್ತದಲ್ಲಿ ₹25,000 ವನ್ನು ಬಾಲಕಿಗೆ ನೀಡಲು ನ್ಯಾಯಾಲಯವು ಆದೇಶಿಸಿದೆ. ‌ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ವಕೀಲ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು