ಬಂಟ್ವಾಳ: ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಕೊ–ಆಪರೇಟಿವ್ ಸೊಸೈಟಿ ಕಳೆದ ಸಾಲಿನಲ್ಲಿ ಸುಮಾರು ₹ 360.19 ಕೋಟಿ ವ್ಯವಹಾರ ನಡೆಸಿ, ₹ 1.61 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ 14ರಷ್ಟು ಲಾಭಾಂಶ ನೀಡಲಾಗುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ ಹೇಳಿದರು.
ಇಲ್ಲಿನ ಪಾಣೆಮಂಗಳೂರಿನಲ್ಲಿ ಸುಮಂಗಲಾ ಕ್ರೆಡಿಟ್ ಕೊ–ಆಪರೇಟಿವ್ ಸೊಸೈಟಿ ವತಿಯಿಂದ ನಡೆದ 32ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
9 ಶಾಖೆಗಳನ್ನು ಹೊಂದಿರುವ ಸೊಸೈಟಿಯು ಗೃಹ ನಿರ್ಮಾಣ, ವಾಹನ ಖರೀದಿ, ಜಮೀನು ಮತ್ತು ಚಿನ್ನಾಭರಣ ಅಡಮಾನ ಸಾಲ ಸೇರಿದಂತೆ ಒಟ್ಟು ₹ 73.21 ಕೋಟಿ ಮೊತ್ತದ ಸಾಲ ವಿತರಿಸಿ ಶೇ 94ರಷ್ಟು ಸಾಲ ವಸೂಲಾತಿ ಆಗಿದೆ ಎಂದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸತತ 4ನೇ ಬಾರಿಗೆ ಸಾಧನಾ ಪ್ರಶಸ್ತಿ ಸಿಕ್ಕಿದೆ ಎಂದರು.
ಬಂಟ್ವಾಳ ತಾಲ್ಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಮಾತನಾಡಿದರು.