ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಣ್ಣಮಜಲು: ಲಾರಿ ಪಲ್ಟಿ ಸಿಎನ್‌ಜಿ ಸೋರಿಕೆ

Published 11 ಜೂನ್ 2024, 5:30 IST
Last Updated 11 ಜೂನ್ 2024, 5:30 IST
ಅಕ್ಷರ ಗಾತ್ರ

ಸುಳ್ಯ: ಸಾಂದ್ರೀಕೃತ ನೈಸರ್ಗಿಕ ಅನಿಲ (ಸಿಎನ್‌ಜಿ) ತುಂಬಿದ್ದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮಾಣಿ–ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕನಕಮಜಲು ಬಳಿಯ ಸುಣ್ಣಮಜಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೋಮವಾರ ಸಂಜೆ ಪಲ್ಟಿಯಾಗಿದೆ.

ಲಾರಿಯಲ್ಲಿದ್ದ ಸಿಲಿಂಡರ್‌ಗಳಿಂದ ಸಿಎನ್‌ಜಿ ಸೋರಿಕೆಯಾಗಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಕೆಲಕಾಲ ಅಸ್ತವ್ಯಸ್ತವಾಯಿತು. ಲಾರಿಯು ಮಡಿಕೇರಿ ಕಡೆಯಿಂದ ಮಂಗಳೂರಿನ ಕಡೆಗೆ ಸಿಎನ್‌ಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿತ್ತು. ಜೋರಾಗಿ ಮಳೆ ಸುರಿಯುತ್ತಿದ್ದುದರಿಂದ ಲಾರಿಯು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿತ್ತು. ಸ್ಥಳಕ್ಕೆ ಧಾವಿಸಿದ ಸುಳ್ಯ ಅಗ್ನಿಶಾಮಕ ದಳದವರು ಹೆಚ್ಚಿನ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT