ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: 'ಯಕ್ಷಗಾನ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ’

Published 14 ಆಗಸ್ಟ್ 2023, 14:43 IST
Last Updated 14 ಆಗಸ್ಟ್ 2023, 14:43 IST
ಅಕ್ಷರ ಗಾತ್ರ

ಮಂಗಳೂರು: ಮಹಾಗಣಪತಿ ಪ್ರವಾಸಿ ಯಕ್ಷಗಾನ ಮೇಳ ನಡೂರು ಇದರ ಕಲಾವಿದರಿಂದ ಮಂಗಳೂರಿನ ಡಾನ್‍ಬಾಸ್ಕೊ ಹಾಲ್‌ನಲ್ಲಿ ಕೃಷ್ಣ ಗಾರುಡಿ ಯಕ್ಷಗಾನ ಕಾರ್ಯಕ್ರಮ ಈಚೆಗೆ ನಡೆಯಿತು.

ಕರ್ನಾಟಕ ಯಕ್ಷಧಾಮ ಮತ್ತು ಕಲ್ಕೂರ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರದೀಪ್‌ ಕುಮಾರ್‌ ಕಲ್ಕೂರ, ‘ಮಳೆಗಾಲದಲ್ಲಿ ಯಕ್ಷಗಾನ ಕಲಾವಿದರಿಗೆ ಪ್ರೋತ್ಸಾಹದ ಅಗತ್ಯ ಇರುತ್ತದೆ’ ಎಂದರಲ್ಲದೆ ಮೇಳದ ಕಲಾವಿದರ ಪರಿಶ್ರಮವನ್ನು ಶ್ಲಾಘಿಸಿದರು.

ಭಾಗವತ ಸದಾಶಿವ ಅಮೀನ್ ಅವರನ್ನು ಸನ್ಮಾನಿಸಲಾಯಿತು. ಗಣ್ಯರಾದ ಶಿವಾನಂದ ಪೈ, ಪಿ. ಲಕ್ಷ್ಮೀನಾರಾಯಣ ಉಪಾಧ್ಯ, ಪೊಳಲಿ ನಿತ್ಯಾನಂದ ಕಾರಂತ ಮೊದಲಾದವರು ಇದ್ದರು.

ಯಕ್ಷ ಕವಿ ಜನಾರ್ದನ ಹಂದೆ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು. ಕೊನೆಗೆ ಯಕ್ಷಗಾನ ಪ್ರದರ್ಶನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT