ಮಂಗಳೂರು: ಉತ್ಕರ್ಷ್ ಚಾರಿಟಬಲ್ ಮತ್ತು ವೆಲ್ಫೇರ್ ಟ್ರಸ್ಟ್, ಮಂಗಳೂರು ಮಹಾನಗರ ಪಾಲಿಕೆ, ಸುರತ್ಕಲ್ ವಲಯ ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ಸುರತ್ಕಲ್ ವಲಯದ ಪೌರ ಕಾರ್ಮಿಕರಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಸುರತ್ಕಲ್ನ ಎಂಸಿಸಿ ಕಟ್ಟಡದಲ್ಲಿ ನಡೆಯಿತು.

ಈ ಹಿಂದೆ ನಡೆಸಿದ್ದ ವೈದ್ಯಕೀಯ ಮತ್ತು ಕಣ್ಣಿನ ತಪಾಸಣಾ ಶಿಬಿರದಲ್ಲಿ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಅವರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು.

ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತ ಬಾಲಚಂದ್ರ, ಕಾರ್ಯಕ್ರಮ ಆಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಉತ್ಕರ್ಷ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕಿ ಅರುಂಧತಿ ಹೆಗ್ಡೆ, ಸಮುದಾಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಚೇರಿ ಅಧೀಕ್ಷಕಿ ಎಸ್. ಮೀರಾ ಅವರು ಫಲಾನುಭವಿಗಳಿಗೆ ಕನ್ನಡಕ ಹಸ್ತಾಂತರಿಸಿದರು. ಸುರತ್ಕಲ್ ವಲಯದ ಆರೋಗ್ಯ ನಿರೀಕ್ಷಕ ಸಂಜಯ್ ಕುಮಾರ್ ಮತ್ತು ಆರೋಗ್ಯ ಮೇಲ್ವಿಚಾರಕ ಪ್ರವೀಣ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-29-1911920536

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.