ಸುರತ್ಕಲ್: ಕಾನ-ತೋಕೂರು -ಜೋಕಟ್ಟೆ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಮಾಡುವಂತೆ ಒತ್ತಾಯಿಸಿ ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೊ ರಿಕ್ಷಾ ಚಾಲಕರ ಸಂಘ (ಸಿಐಟಿಯು), ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಡಿವೈಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ, ಎಂಎಸ್ಇಝಡ್ ಮತ್ತು ಎಂಆರ್ಪಿಎಲ್ ಕಂಪನಿಗಳು ನಿರ್ವಹಿಸಬೇಕಾದ ಮುಖ್ಯ ರಸ್ತೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಿತ್ಯ ರಸ್ತೆ ಅಪಘಾತ ಸಂಭವಿಸುತ್ತಿವೆ. 15ದಿನಗಳ ಒಳಗಾಗಿ ಈ ರಸ್ತೆ ದುರಸ್ತಿ ಆಗದಿದ್ದಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ ಎಂದರು.

ಡಿವೈಎಫ್ಐ ಜಿಲ್ಲಾ ಘಟಕದ ಕಾರ್ಯದರ್ಶಿ ಸಂತೋಷ್ ಬಜಾಲ್, ಸುರತ್ಕಲ್ ಸೆಕ್ರೆಡ್ ಹಾರ್ಟ್ ಚರ್ಚ್ ಉಪಾಧ್ಯಕ್ಷ ಲಿಗೋರಿ ಜಾರ್ಜ್, ಡಿವೈಎಫ್ಐ ನಗರ ಘಟಕದ ಕಾರ್ಯದರ್ಶಿ ತಯ್ಯೋಬ್ ಬೆಂಗ್ರೆ, ಆಟೊ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಅಬ್ದುಲ್ ಬಷೀರ್ ಮಾತನಾಡಿದರು.

ವಿವಿಧ ಸಂಘಟನೆಗಳ ಪ್ರಮುಖರಾದ ಅಬೂಬಕ್ಕರ್ ಬಾವ ಜೋಕಟ್ಟೆ, ಇಕ್ಬಾಲ್ ಜೋಕಟ್ಟೆ, ಬಿ.ಕೆ ಮಸೂದ್, ಅಜ್ಮಾಲ್ ಅಹ್ಮದ್, ಶ್ರೀನಾಥ್ ಕುಲಾಲ್, ಜಗದೀಶ್, ಅಬ್ದುಲ್ ರಹೀಮ್, ಅಬೂಬಕ್ಕರ್ ಕೆ.ಪಿ, ಫ್ರಾನ್ಸಿಸ್ ಡಿಸೋಜಾ, ಮುಸ್ತಫಾ ಒಟ್ಟೆಕಾಯರ್, ಲಕ್ಷ್ಮೀಶ ಅಂಚನ್, ಹಂಝ ಮೈಂದಗುರಿ, ಸುಧೀರ್ ಕೋಡಿಕೆರೆ, ಐ.ಮೊಹಮ್ಮದ್, ಇಬ್ರಾಹಿಂ ಹಳೆಮನೆ, ಹನೀಫ್ ಕುಳಾಯಿ, ನವಾಜ್ ಕುಳಾಯಿ, ಸಿರಾಜ್ ಮೈಂದಗುರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-29-1555654389

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.