ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರತ್ಕಲ್ | ಯಕ್ಷಸಿರಿ ಕೇಂದ್ರದ ವಾರ್ಷಿಕೋತ್ಸವ ನ.11ರಂದು

Published 8 ನವೆಂಬರ್ 2023, 13:17 IST
Last Updated 8 ನವೆಂಬರ್ 2023, 13:17 IST
ಅಕ್ಷರ ಗಾತ್ರ

ಸುರತ್ಕಲ್: ಇಲ್ಲಿನ ಬಂಟರ ಸಂಘದ ಆಶ್ರಯದಲ್ಲಿ ಯಕ್ಷಸಿರಿ ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಇದೇ 11ರಂದು ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಉದ್ಘಾಟಿಸುವರು.

ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ಮಾತಾ ಡೆವಲಪರ್ಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಯಕ್ಷಮಿತ್ರರು ಸಂಸ್ಥೆಯ ಅಧ್ಯಕ್ಷ ಜಗದೀಪ್ ಶೆಟ್ಟಿ, ಪೆರ್ಮುದೆ ದಿವ್ಯರೂಪ ಕನ್‌ಸ್ಟ್ರಕ್ಷನ್ ಆಡಳಿತ ನಿರ್ದೇಶಕ ಯಾದವ ಕೋಟ್ಯಾನ್, ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಶಕುಂತಳಾ ರಮಾನಂದ ಭಟ್, ಉದ್ಯಮಿ ಹರೀಶ್ ಶೆಟ್ಟಿ ಪೆರ್ಮುದೆ, ಪುಂಡಲೀಕ ಹೊಸಬೆಟ್ಟು, ಸಹನಾ ರಾಜೇಶ್ ರೈ ಭಾಗವಹಿಸಲಿದ್ದಾರೆ.

ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಮಾಜಿ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಬಾಳ ಜಗನ್ನಾಥ ಶೆಟ್ಟಿ ಮತ್ತು ಕೇಸರಿ ಪೂಂಜ ಅತಿಥಿಗಳಾಗಿರುವರು. ಯಕ್ಷಸಿರಿ ಸಂಘಟಕಿ ಕವಿತಾ ಪುಷ್ಪರಾಜ್ ಶೆಟ್ಟಿ ಅವರನ್ನು ಗೌರವಿಸಲಾಗುವುದು.

ಸಂಜೆ 5 ಗಂಟೆಗೆ ಯಕ್ಷಸಿರಿಯ ಕಲಾವಿದರ ರಂಗಪ್ರವೇಶ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ಮಾತೃಕಾ ಮಹಿಮೆ ಯಕ್ಷಗಾನ ಬಯಲಾಟ ನಡೆಯಲಿದೆ. 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT