ಮಂಗಳೂರು: ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ನಡೆಯಲಿರುವ ಸರ್ಫಿಂಗ್ ವೇಳೆ ಅಪಾಯ, ಅವಘಡಗಳು ಸಂಭವಿಸದಂತೆ ಆಯೋಜಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.

ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಡೆಯುವ ‘ನ್ಯಾಷನಲ್ ಸರ್ಫಿಂಗ್ ಫೆಸ್ಟಿವಲ್– 2022’ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಸಮುದ್ರದ ಅಲೆಗಳ ಮೇಲೆ ಆಡುವ ಕ್ರೀಡೆಯಲ್ಲಿ ಹೆಚ್ಚಿನ ಜಾಗ್ರತೆ ಅವಶ್ಯ. ಲೈಫ್‌ಗಾರ್ಡ್‌ಗಳು, ಆಂಬುಲೆನ್ಸ್, ಮೆಡಿಕಲ್ ಪರಿಕರವಿರುವ ವಾಹನ, ಜೀವರಕ್ಷಕ ಸಾಧನಗಳು, ದೋಣಿಗಳು ಸೇರಿದಂತೆ ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆತ ಸಾಧನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು’ ಎಂದು ಹೇಳಿದರು.

ಯಾವುದೇ ಅವಘಡಗಳು ಆಗದಂತೆ ಎನ್ಎಂಪಿಟಿ, ಕರಾವಳಿ ಕಾವಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿಯು ಎಚ್ಚರ ವಹಿಸಬೇಕು. ಸರ್ಫಿಂಗ್ ಯಶಸ್ವಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು. ಈ ಸಾಹಸ ಕ್ರೀಡೆಗಳು ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಬೇಕು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಅದಕ್ಕಾಗಿ ಸಮೂಹ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯವನ್ನು ಮಾಡಬೇಕು ಎಂದರು.

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ರಾಮ್ ಮೋಹನ್, ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿ ಗೌರವ ಹೆಗ್ಡೆ, ಎನ್‌ಎಂಪಿಟಿ ಸಿವಿಲ್ ಎಂಜಿನಿಯರ್ ಶಶಿಧರ್ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.