ಗುರುವಾರ , ಸೆಪ್ಟೆಂಬರ್ 23, 2021
23 °C

ಭಾರತೀಯ ಆರೋಗ್ಯಸೇವೆ ಪೂರೈಕೆದಾರರ ಸಂಘ: ಡಾ.ಸುಶಿಲ್ ಜತನ್ನ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಉಡುಪಿಯ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನ ಅವರು ಭಾರತೀಯ ಆರೋಗ್ಯಸೇವೆ ಪೂರೈಕೆದಾರರ ಸಂಘದ (ಎಎಚ್‍ಪಿಐ) ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಜನರಲ್ ಮೆಡಿಸಿನ್, ಪಬ್ಲಿಕ್ ಹೆಲ್ತ್ ಮೆಡಿಸಿನ್ ಮತ್ತು ಮ್ಯಾನೇಜ್‍ಮೆಂಟ್ ಎಂಬ ಮೂರು ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅರ್ಹತೆಗಳನ್ನು ಹೊಂದಿರುವ ವೈದ್ಯ ಎಂಬ ವಿಶೇಷ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಪ್ರಸ್ತುತ ಅವರು ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ (ಸಿಎಂಸಿ) ಮಂಡಳಿ ಮತ್ತು ಕಾರ್ಯಕಾರಿ ಸಮಿತಿಯಲ್ಲಿ  ಕಾರ್ಯನಿರ್ವಹಿಸುತ್ತಿದ್ದಾರೆ. ರೋಟರಿ ಕ್ಲಬ್ ಆಫ್ ಮಂಗಳೂರಿನ ಸದಸ್ಯರಾಗಿದ್ದಾರೆ. ಈ ಹಿಂದೆ ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ, ಅದರ ಬ್ಲಡ್ ಬ್ಯಾಂಕ್ ಸಮಿತಿಯ ಅಧ್ಯಕ್ಷ ಆಗಿದ್ದರು. ಕರ್ನಾಟಕ ಅಂತರ ಡಯೋಸಿಸ್ ವೈದ್ಯಕೀಯ ಮಂಡಳಿಯ ಕಾರ್ಯದರ್ಶಿಯಾಗಿ , ಸಿಎಸ್‍ಐ ಸಿನೋಡ್ ನ ವೈದ್ಯಕೀಯ ಮಂಡಳಿಯ ಸಂಯೋಜಕರಾಗಿದ್ದರು.

ಎಎಚ್‍ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ. ಅಲೆಕ್ಸ್ ಥಾಮಸ್, ಎಎಚ್‍ಪಿಐನ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡಾ.ಸುಶೀಲ್ ಜಥನ್ನಾ ಅವರನ್ನು ಅಭಿನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು