ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಲಕಾವೇರಿ ಬೆಟ್ಟ ಕುಸಿತ: ಬಂಟ್ವಾಳದ ಅರ್ಚಕ ನಾಪತ್ತೆ

Last Updated 6 ಆಗಸ್ಟ್ 2020, 16:13 IST
ಅಕ್ಷರ ಗಾತ್ರ

ಬಂಟ್ವಾಳ: ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದವರಲ್ಲಿ ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ರವಿಕಿರಣ್ ಭಟ್ (24) ಕೂಡಾ ಸೇರಿದ್ದಾರೆ.

ಇಲ್ಲಿನ ಕನಪಾಡಿ ನಿವಾಸಿ ರಾಮಕೃಷ್ಣ ರಾವ್ ಮತ್ತು ರೇಣುಕಾ ದಂಪತಿ ಪುತ್ರ ರವಿಕಿರಣ್ ಭಟ್ ಕಳೆದ ಎರಡು ವರ್ಷಗಳಿಂದ ತಲಕಾವೇರಿ ಕ್ಷೇತ್ರದಲ್ಲಿ ಅರ್ಚಕರ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಾಕ್‌ಡೌನ್ ಆಗಿದ್ದರಿಂದ ಇವರು ಹುಟ್ಟೂರಿಗೆ ಬಂದಿದ್ದರು. ಬಳಿಕ ಮೇನಲ್ಲಿ ಮತ್ತೆ ತಲಕಾವೇರಿಗೆ ವಾಪಸಾಗಿದ್ದರು.

ಶಾಸಕ ರಾಜೇಶ ನಾಯ್ಕ್ ಗುರುವಾರ ಸಂಜೆ ಭಟ್‌ ಅವರ ಮನೆಗೆ ತೆರಳಿ, ಮನೆಯವರಿಗೆ ಧೈರ್ಯ ತುಂಬಿದರು. ಕೆ.ಜೆ.ಬೋಪಯ್ಯ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT