ಸೋಮವಾರ, ಸೆಪ್ಟೆಂಬರ್ 20, 2021
23 °C
ರದ್ದಾದ ಮುಖ್ಯಮಂತ್ರಿ ಭೇಟಿ

ತಲಪಾಡಿ ಗಡಿಯಲ್ಲಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ತಲಪಾಡಿ ಗಡಿಯಲ್ಲಿ ಶುಕ್ರವಾರ ಮಂಜೇಶ್ವರ ಪಂಚಾಯಿತಿ ಯುಡಿವೈಎಫ್ ಸಮಿತಿ ನೇತೃತ್ವದಲ್ಲಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲಪಾಡಿ ಗಡಿ ಪ್ರದೇಶಕ್ಕೆ ಭೇಟಿ ನೀಡುವ ಮಾಹಿತಿ ಹಿನ್ನೆಲೆಯಲ್ಲಿ ಕೇರಳ ಭಾಗದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿತ್ತು. ಗುರುವಾರ ಸಂಜೆ ಮುಖ್ಯಮಂತ್ರಿ ಇಲ್ಲಿ ಭೇಟಿ ನೀಡುವುದನ್ನು ರದ್ದುಪಡಿಸಲಾಯಿತು.

ತಲಪಾಡಿ ಗಡಿ ತಲುಪಿದ ಯುಡಿವೈಎಫ್ ಕಾರ್ಯಕರ್ತರು ಸಾಂಕೇತಿಕ ಪ್ರತಿಭಟನೆ ನಡೆಸಿ, ಎರಡು ಡೋಸ್ ಲಸಿಕೆ ಪಡೆದವರಿಗೆ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು. ಹರ್ಷಾದ್ ವರ್ಕಾಡಿ, ಸೈಫುಲ್ಲಾ ತಂಙಳ್, ಸಿದ್ದೀಕ್ ಮಂಜೇಶ್ವರ, ಮುಸ್ತಫಾ ಉದ್ಯಾವರ, ಇಲ್ಯಾಸ್ ಕುಂಜತ್ತೂರು ಅಬ್ದುಲ್ಲತೀಫ್ ಬಾಬ, ಪುತ್ತುಚ್ಙ, ಮುಬಾರಕ್ ಗುಡ್ಡೆಕೇರಿ, ರಿಯಾಜ್ ಇದ್ದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.